Mysore
20
overcast clouds
Light
Dark

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಗೂಂಡಾ ಪದ ಬಳಸಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದ್ವೇಷ ಭಾಷಣ ಆರೋಪದಡಿ ಶಿವರಾಜ್‌ ತಂಗಡಗಿ ವಿರುದ್ಧ ಕೂಡಾ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸದಸ್ಯ ರವಿಕುಮಾರ್‌ ಹಾಗೂ ಛಲವಾದಿ ನಾರಾಯಣಸ್ವಾಮಿ ಈ ಸಂಬಂಧ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ ದೂರಿನನ್ವಯ ಚುನಾವಣಾ ನೀತಿ ಸಂಹಿತೆ ಉಲಲಂಘಿಸಿದ ಇಬ್ಬರು ನಾಯಕರನ್ನು ಪ್ರಚಾರ ನಡೆಸದಂತೆ ನಿರ್ಬಂಧ ಹೇರಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ಗೃಹ ಸಚಿವ ಹಾಗೂ ಪ್ರಧಾನಿ ಬಗ್ಗೆ ನಿಂದನೀಯ ಪದ ಬಳಕೆ ಖಂಡನೀಯ. ಈ ಬಗ್ಗೆ ದೂರು ನೀಡಿದ್ದೇವೆ. 153a, 153b, 171c, 295a, 505(2) ಈ ಸೆಕ್ಷನ್ ಉಲ್ಲಂಘನೆ ಮಾಡಿದ್ದಾರೆ. ಇವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ತಿಳಿಸಿದೆ ಎಂದು ದೂರುರಾರರು ಹೇಳಿದರು.