ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗೂಂಡಾ ಪದ ಬಳಸಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದ್ವೇಷ ಭಾಷಣ ಆರೋಪದಡಿ ಶಿವರಾಜ್ ತಂಗಡಗಿ ವಿರುದ್ಧ ಕೂಡಾ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸದಸ್ಯ ರವಿಕುಮಾರ್ ಹಾಗೂ ಛಲವಾದಿ ನಾರಾಯಣಸ್ವಾಮಿ ಈ ಸಂಬಂಧ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ ದೂರಿನನ್ವಯ ಚುನಾವಣಾ ನೀತಿ ಸಂಹಿತೆ ಉಲಲಂಘಿಸಿದ ಇಬ್ಬರು ನಾಯಕರನ್ನು ಪ್ರಚಾರ ನಡೆಸದಂತೆ ನಿರ್ಬಂಧ ಹೇರಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಗೃಹ ಸಚಿವ ಹಾಗೂ ಪ್ರಧಾನಿ ಬಗ್ಗೆ ನಿಂದನೀಯ ಪದ ಬಳಕೆ ಖಂಡನೀಯ. ಈ ಬಗ್ಗೆ ದೂರು ನೀಡಿದ್ದೇವೆ. 153a, 153b, 171c, 295a, 505(2) ಈ ಸೆಕ್ಷನ್ ಉಲ್ಲಂಘನೆ ಮಾಡಿದ್ದಾರೆ. ಇವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ತಿಳಿಸಿದೆ ಎಂದು ದೂರುರಾರರು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…