ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಚಿವ ಹಾಗೂ ಬಿಜೆಪಿ ಹಾಲಿ ಶಾಸಕ ಎಸ್.ಸುರೇಶ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಾಜಿ ಸಚಿವ ಸುರೇಶ್ ಕುಮಾರ್ ಅವರ ಮೆದುಳಿಗೆ ಜ್ವರ ತಗುಲಿರುವ ಬಗ್ಗೆ ಮಾಹಿತಿ ಕೇಳಿಬಂದಿದೆ. ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್ ಪ್ರಯಾಣ ಬೆಳೆಸಿದ್ದ ಸುರೇಶ್ ಕುಮಾರ್ ಅವರು, ಮುಡಾ ಪಾದಯಾತ್ರೆಯಲ್ಲೂ ಭಾಗಿಯಾಗಿದ್ದರು.
ಕಳೆದ ಮೂರ್ನಾಲ್ಕು ದಿನಗಳಿಂದಲೂ ತೀವ್ರ ಜ್ವರದಿಂದ ಬಳಲುತ್ತಿದ್ದರು. ಕಳೆದ ರಾತ್ರಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…