ರಾಜ್ಯ

ಬೆಂಗಳೂರಿನಲ್ಲಿ ವಿಜಯೇಂದ್ರ ಬೆಂಬಲಿಗರ ಸಭೆ: ಭಿನ್ನರ ಉಚ್ಛಾಟನೆಗೆ ಆಗ್ರಹ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ನಾಯಕರು ಇಂದು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಭಿನ್ನಮತೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನಿವಾಸದಲ್ಲಿ ಸಭೆ ನಡೆಸಿದ ಹಲವು ನಾಯಕರು, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರನ್ನು ಉಚ್ಛಾಟನೆ ಮಾಡುವಂತೆ ಆಗ್ರಹಿಸಿದರು.

ಇಂದು ನಡೆದ ಸಭೆಯಲ್ಲಿ ರೇಣುಕಾಚಾರ್ಯ, ಸಂಪಂಗಿ, ಲಕ್ಷ್ಮೀನಾರಾಯಣ ಸೇರಿದಂತೆ ಹಲವು ನಾಯಕರು ಭಾಗಿಯಾಗಿ ವಿಜಯೇಂದ್ರ ಪರ ಬ್ಯಾಟ್‌ ಮಾಡಿದರು.

ಸಭೆ ಬಳಿಕ ಮಾತನಾಡಿದ ಹಲವು ನಾಯಕರು, ಶಾಸಕ ಯತ್ನಾಳ್‌ ಅಂಡ್‌ ಟೀಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಕುಮಾರ್‌ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ್‌, ಡಿ.ಕೆ.ಹರೀಶ್‌ ಅವರನ್ನು ಮುಲಾಜಿಲ್ಲದೇ ಪಕ್ಷದಿಂದ ಕಿತ್ತುಹಾಕಬೇಕು. ಇಲ್ಲದಿದ್ದರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ವಿಜಯೇಂದ್ರ ಅವರ ಪಾತ್ರವಿಲ್ಲ. ವರಿಷ್ಠರ ಸೂಚನೆಯಂತೆಯೇ ಅವರು ನೇಮಕ ಮಾಡಿದ್ದಾರೆ. ಜಿಲ್ಲಾ ಕೋರ್‌ ಕಮಿಟಿ ಸದಸ್ಯರ ಅಭಿಪ್ರಾಯವನ್ನು ಪಡೆದುಕೊಂಡು ಅಂತಿಮವಾಗಿ ಎಲ್ಲರಿಗೂ ಒಪ್ಪಿಗೆಯಾಗುವವರನ್ನೇ ಆಯ್ಕೆ ಮಾಡಿದ್ದಾರೆ. ಇದಕ್ಕೆ ವಿರೋಧ ಮಾಡುವುದು ಸರಿಯಲ್ಲ ಎಂದರು.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

11 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

11 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

11 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

12 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

12 hours ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

12 hours ago