ಬೆಂಗಳೂರು: ರಾಜ್ಯದಲ್ಲಿನೀ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ವಾಮ ಮಾರ್ಗದಲ್ಲಿ ಅಧಿಕಾರ ನಡೆಸುವ ಮೂಲಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ನಗರದ ಕೆಪಿಸಿಸಿ ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿತ್ತು.
ಬಿಜೆಪಿಯವರು ಚೆನ್ನಾಗಿ ತಿಂದು, ಸಾವಿರಾರು ಕೋಟಿ ಕೆಲಸ ಶುರು ಮಾಡಿಸಿ ಸುಮಾರು 40 ಸಾವಿರ ಕೋಟಿಗೂ ಹೆಚ್ಚು ಬಿಲ್ ಕೊಡದೆ, ಬಿಲ್ ಬಾಕಿ ಉಳಿಸಿ ಮನೆಗೆ ಹೋಗಿದ್ದಾರೆ. ದುರಾಡಳಿತ ನಡೆಸಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.
ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9,000 ಕೋಟಿ, ಸಣ್ಣನೀರಾವರಿ ಇಲಾಖೆಯಲ್ಲಿ 2,000 ಕೋಟಿ ರೂಪಾಯಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6,000 ಕೋಟಿ ರೂಪಾಯಿ, ಬೆಂಗಳೂರು ನಗರ 5,000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ.
ಹೀಗೆ ರಾಜ್ಯವನ್ನು ಹಾಳುಮಾಡಿ, ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿ ಹೋಗಿದ್ದಾರೆ. ಇಷ್ಟಾದರೂ ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ.
೫ ಗ್ಯಾಂರೆಂಟಿಯಲ್ಲಿ ಬಿಜೆಪಿ ಫಲಾನುಭವಿಗಳೆ ಹೆಚ್ಚು: 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ ಬಿಜೆಪಿಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದು ದೇಶದಲ್ಲೇ ಮೊದಲು. ಪ್ರತಿಯೊಬ್ಬ ಕಾರ್ಯಕರ್ತನೂ ಎದೆ ಎತ್ತಿ, ತಲೆ ಎತ್ತಿ ಹೇಳಿ ಎಂದಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕೈಮುಗಿದು ಮನವಿ ಮಾಡುತ್ತೇನೆ. ದಯವಿಟ್ಟು ನಿಮ್ಮ ಹೃದಯದ ಮಾತು ಕೇಳಿ ಎಂದಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…