ರಾಜ್ಯ

ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದೂ ಬೇರೆ- ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸುವುದಿಲ್ವ? ನಮ್ಮೂರುಗಳಲ್ಲಿ ರಾಮಮಂದಿರಗಳನ್ನು ಕಟ್ಟಿಲ್ವ, ರಾಮನ ಭಜನೆ ಮಾಡುವುದಿಲ್ವ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಆದ್ದರಿಂದ ಬಿಜೆಪಿಯ ಡೋಗೀತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಭಾರತ್ ಜೋಡೋ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಮಹಾತ್ಮಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು

ಜನ ಸಂಘ, ಆರೆಸ್ಸೆಸ್ ಮತ್ತು ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಲಿಲ್ಲ. ಬ್ರಿಟಿಷರ ಅವಧಿಯಲ್ಲೇ ಆರೆಸ್ಸೆಸ್ ಹುಟ್ಟಿತ್ತು. ಆದರೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದೇ ಒಂದು ದಿನವೂ ಇವರು ಭಾಗವಹಿಸಲಿಲ್ಲ. ನೆಹರೂ -ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ತುಂಬ ಸಾವಿರಾರು ಸಮಸ್ಯೆಗಳಿದ್ದವು. ಆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಾಗಿ ಬಂದಿದ್ದು ಕಾಂಗ್ರೆಸ್. ಈಗಲೂ ಹಲವು ಸಮಸ್ಯೆಗಳಿವೆ. ಇವುಗಳ ಪರಿಹಾರಕ್ಕೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಹೋರಾಟದ ಮಾರ್ಗದಲ್ಲೇ ಅಧಿಕಾರಕ್ಕೆ ಬರುತ್ತದೆ. ಭಾರತ್ ಜೋಡೋ ನಂತರ ರಾಹುಲ್ ಗಾಂಧಿ ಮತ್ತೊಂದು ಸುತ್ತು ಪಾದಯಾತ್ರೆ ಹೊರಟಿದ್ದಾರೆ. ರಾಹುಲ್ ಗಾಂಧಿ ದೇಶದ ನೇತೃತ್ವ ವಹಿಸುತ್ತಾರೆ. ಪ್ರಧಾನಿ ಆಗುತ್ತಾರೆ ಎಂದು ಸಿದ್ದರಾಮಯ್ಯ ನುಡಿದರು.

ಸ್ವಾತಂತ್ರ್ಯಾ ನಂತರ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ವ ರಂಗಗಳಲ್ಲೂ ಪ್ರಗತಿ ಸಾಧಿಸಿತು. ದೇಶದಲ್ಲಿರುವ ಎಲ್ಲಾ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವಧಿಯಲ್ಲಿ ಬಿಜೆಪಿಯವರು ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಸತ್ಯದ ತಲೆ ಮೇಲೆ ಹೊಡೆದಂತೆ ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು.

ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ, ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅರಣ್ಯ ಸಚಿವ ಈಶ್ವ‌ರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವೆ ರಾಣಿ ಸತೀಶ್ ಸೇರಿ ಹಲವು ಮುಖಂಡರು ಭಾಗವಹಿಸಿದ್ದರು.

andolanait

Recent Posts

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

21 seconds ago

ಕೃಷಿ ಪಂಪ್‌ಸೆಟ್‌ ಆನ್‌ ಮಾಡುವಾಗ ವಿದ್ಯುತ್‌ ಸ್ಪರ್ಶ : ವ್ಯಕ್ತಿ ಸಾವು

ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ…

19 mins ago

ಹೊಸವರ್ಷ : ಪೊಲೀಸರ ಕಾರ್ಯ ಶ್ಲಾಘಿಸಿದ ಸಿಎಂ

ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.…

3 hours ago

ಐಪಿಲ್‌ನಲ್ಲಿ ಬಾಂಗ್ಲಾ ಆಟಗಾರ : ಶಾರುಖ್‌ ಒಡೆತನದ ಕೆಕೆಆರ್‌ ವಿರುದ್ಧ ಬಿಜೆಪಿ ವಾಗ್ದಾಳಿ

ಮುಂಬೈ :  ಐಪಿಎಲ್‌ ತಂಡವಾದ ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ತಂಡಕ್ಕೆ ನೆರೆಯ ಬಾಂಗ್ಲಾದೇಶದ ಆಟಗಾರನನ್ನು ಖರೀದಿಸಿರುವ ಬಾಲಿವುಡ್…

4 hours ago

ಮರ್ಯಾದೆಗೇಡು ಹತ್ಯೆ | ಮಾನ್ಯ ಹೆಸರಲ್ಲಿ ಕಾಯ್ದೆಗೆ ಚಿಂತನೆ ; ಸಚಿವ ಮಹದೇವಪ್ಪ

ಹುಬ್ಬಳ್ಳಿ : ಮರ್ಯಾದೆಗೇಡು ಹತ್ಯೆ ಅಂತಹ ಘಟನೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ಜಾರಿಗೊಳಿಸುವ ಬಗ್ಗೆ ಗಂಭೀರ ಚಿಂತನೆ…

4 hours ago

ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳ ತನಿಖೆ ಬಳಿಕ ಪುನರ್ವಸತಿ ಕಲ್ಪಿಸಿ: ಯತ್ನಾಳ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ನುಸುಳುಕೋರರು, ಬಾಂಗ್ಲಾದೇಶದವರು, ರೋಹಿಂಗ್ಯಾಗಳು ಯಾರು ಅಂತ ತನಿಖೆ ಮಾಡಿ, ಬಳಿಕ ಪುನರ್‌ ವಸತಿ ಕಲ್ಪಿಸಬೇಕು ಎಂದು ಶಾಸಕ…

5 hours ago