ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್‌ಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ.
ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅಭಿಮಾನಿ ಬಳಗ ಹಾಗೂ ಸಮಾನ ಮನಸ್ಕರ ವೇದಿಕೆ ವತಿಯಿಂದ ಇಂದು ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದರೆ ಸಿಪಿವೈಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ ಹಿನ್ನೆಲೆಯಲ್ಲಿ ಈ ಸಮಾವೇಶವನ್ನು ರದ್ದು ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ನಾಳೆ ದೆಹಲಿಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂಬ ಮಾತುಗಳು ಹೇಳಿ ಬರುತ್ತಿವೆ. ಹಾಗಾಗಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ದೆಹಲಿಗೆ ಕರೆಸಿರುವ ಬಿಜೆಪಿ ನಾಯಕರು ಟಿಕೆಟ್ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ನಾಳೆ ಅಭ್ಯರ್ಥಿ ಯಾರೆಂದು ತಿಳಿಯಲಿದ್ದು, ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಚಿತ್ತ ದೆಹಲಿಯ ಸಭೆಯತ್ತ ನೆಟ್ಟಿದೆ.
ಇಂದು ದೆಹಲಿಗೆ ತೆರಳಿರುವ ಸಿ.ಪಿ.ಯೋಗೇಶ್ವರ್‌ಗೆ ಹೈಕಮಾಂಡ್ ಸಿಹಿ ಸುದ್ದಿ ನೀಡಲಿದೆ ಎನ್ನಲಾಗಿದ್ದು, ಯೋಗೇಶ್ವರ್ ಅಭಿಮಾನಿಗಳ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…