ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಂಡದ ಹೋರಾಟ ಹಾಗೂ ಬಿಜೆಪಿ ಭಿನ್ನಮತದ ಬಗ್ಗೆ ಎರಡು ಪತ್ರ ಬರೆದರೂ ಹೈಕಮಾಂಡ್‌ನಿಂದ ಯಾವುದೇ ಕ್ರಮವಿಲ್ಲ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿಯನ್ನು ದಕ್ಷಿಣ ಭಾರತದ ಹೆಬ್ಬಾಗಿಲು ಎಂದು ಕರೆಯುತ್ತಾರೆ. ಆದರೆ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ, ಬಣ ರಾಜಕೀಯದಿಂದಾಗಿ ಇಂದು ಈ ಪಕ್ಷಕ್ಕೆ ಈ ಸ್ಥಿತಿ ಬಂದಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಈ ಬಗ್ಗೆ ನಾನು ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದೆ. ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆ ಬಗ್ಗೆಯೂ ಪತ್ರ ಬರೆದಿದ್ದೆ. ಆದರೆ ಎರಡೂ ಪತ್ರಗಳಿಗೂ ವರಿಷ್ಠರಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಮ್ಮ ನಾಯಕ ನಡುವಿನ ಭಿನ್ನಮತ ಹೆಚ್ಚು ಸದ್ದು ಮಾಡುತ್ತಿದೆ. ಇದು ಸರಿಯಲ್ಲ. ಎರಡು ಪತ್ರ ಬರೆದಿದ್ದರೂ ಹೈಕಮಾಂಡ್‌ನಿಂದ ಯಾವುದೇ ಕ್ರಮ ಜರುಗಿಸದಿರುವುದು ಹಾಗೂ ಪಕ್ಷಕ್ಕೆ ಇಂದು ಈ ಸ್ಥಿತಿ ಬಂದಿರುವುದು ಬಹಳ ನೋವಿನ ಸಂಗತಿ ಎಂದು ಬೇಸರಪಟ್ಟರು.