ರಾಜ್ಯ

ಬಿಜೆಪಿ ಸಾಮಾಜಿಕ ನ್ಯಾಯ, ಬಡವರ ಹಿತಕ್ಕೆ ವಿರುದ್ಧವಾಗಿರುವ ಪಕ್ಷ: ಮುಖ್ಯಮಂತ್ರಿ ಸಿದ್ದರಾಮಯ್ಯ

  • ಅಪಾಯದಲ್ಲಿರುವ ಸಂವಿಧಾನವನ್ನು ರಕ್ಷಿಸಬೇಕು: ಪ್ರಜಾಪ್ರಭುತ್ವ ಉಳಿಸಬೇಕು

ಬೀದರ್, ಆಳಂದ: ಬಿಜೆಪಿ ಆಡಳಿತದ ಅವಧಿಯಲ್ಲಿ ಸಂವಿಧಾನ ಅಪಾಯದಲ್ಲಿದ್ದು ಅದನ್ನು ರಕ್ಷಣೆ ಮಾಡಬೇಕಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಎಲ್ಲರೂ ಚಿಂತನೆ ನಡೆಸಬೇಕು. ದೇಶದ ಭವಿಷ್ಯ ರೂಪಿಸಲು ಇದು ಬಹಳ ಮುಖ್ಯ. ಜನತೆ ವಿಚಾರ ಮಾಡಿ ಯಾವ ಪಕ್ಷಕ್ಕೆ ಅಧಿಕಾರ ಕೊಟ್ಟರೆ ದೇಶದ ಹಿತ ಕಾಪಾಡುತ್ತಾರೆ ಎಂದು ತೀರ್ಮಾನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರೀ ರಾಮ ಮಾರ್ಕೆಟ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಪರವಾಗಿ ಪ್ರಜಾಧ್ವನಿ -02 ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ನರೇಂದ್ರ ಮೋದಿಯವರು 10 ವರ್ಷಗಳಿಂದ ಪ್ರಧಾನ ಮಂತ್ರಿಯಾಗಿದ್ದಾರೆ. ಈ ಸುದೀರ್ಘ ಅವಧಿಯಲ್ಲಿ ಈ ದೇಶದ ಬಡವರಿಗೆ , ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಕಾರ್ಯಕ್ರಮಗಳನ್ನು ಕೊಟ್ಟಿಲ್ಲ. ಈ ವರ್ಗದ ಪರವಾಗಿ ಯಾವತ್ತೂ ಕೆಲಸ ಮಾಡಿಲ್ಲ. ಬಿಜೆಪಿ ಸಾಮಾಜಿಕ ನ್ಯಾಯದ ವಿರುದ್ಧ, ಬಡವರ ಹಿತಕ್ಕೆ ವಿರುದ್ಧವಾಗಿರುವ ಪಕ್ಷ. ಸಂವಿಧಾನ, ಪ್ರಜಾಪ್ರಭುತ್ವಕ್ಕೆ ವಿರೋಧಿಯಾಗಿರುವ ಪಕ್ಷ. ಇದನ್ನು ಜನರು ಗಮನದಲ್ಲಿರಿಸಿಕೊಳ್ಳಬೇಕು. ನರೇಂದ್ರ ಮೋದಿ ನೀಡಿದ್ದ ಭರವಸೆಗಳನ್ನು ಒಮ್ಮೆ ನೆನಪಿಸಿಕೊಳ್ಳಿ. ಭರವಸೆಗಳನ್ನು ಈಡೇರಿಸದಿದ್ದ ಮೇಲೆ ಅವರಿಗೆ ಮತ ಕೇಳುವ ನೈತಿಕತೆ ಇಲ್ಲ.

ದೇಶದ ಯುವಕರಿಗೆ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿ ನಿರುದ್ಯೋಗದ ಸಮಸ್ಯೆಯನ್ನು ಹೆಚ್ಚಿಸಿದ್ದಾರೆ. ರೈತರ ಆದಾಯ ಎರಡು ಪಟ್ಟು ಹೆಚ್ಚಿಸುತ್ತೇವೆ ಎಂದು ಹೇಳಿ, 10 ವರ್ಷಗಳಲ್ಲಿ ಒಂದು ರೂಪಾಯಿ ಕೂಡ ಹೆಚ್ಚಾಗಿಲ್ಲ. ಅದಕ್ಕೆ ಬದಲಾಗಿ ವೆಚ್ಚ ಹೆಚ್ಚಾಗಿದೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಇಳಿಸುತ್ತೇನೆ ,ಬಡವರ, ಮಧ್ಯಮವರ್ಗದ ಜನರ ಬದುಕು ಹಸನು ಮಾಡುತ್ತೇವೆ, ಅಚ್ಚೇ ದಿನ್ ಬರುತ್ತದೆ ಎಂದು ಹೇಳಿ ಎಲ್ಲಾ ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಿಸಿದ್ದಾರೆ.

ರೈತರ ಬೆಲೆಗಳಿಗೆ ನ್ಯಾಯಯುತ ಬೆಲೆ, ಸ್ವಾಮಿನಾಥನ್ ವರದಿ ಜಾರಿ ಮಾಡುತ್ತೇವೆ ಎಂದರು. ರೈತರು ಕೆಲವು ತಿಂಗಳಿನಿಂದ ಸಾಲ ಮನ್ನಾ, ಎಂ.ಎಸ್.ಪಿ ಕೊಡಲು ಕಾನೂನು ಮಾಡಬೇಕೆಂದು ಚಳುವಳಿ ಮಾಡುತ್ತಿದ್ದಾರೆ. ರೈತರು ಸತ್ತರೂ ಅವರ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡಲಿಲ್ಲ ಎಂದರು.

10 ವರ್ಷಗಳಲ್ಲಿ ಬಿಜೆಪಿ ಯಾವ ಭರವಸೆಗಳನ್ನು ಈಡೇರಿಸಿಲ್ಲ : ನರೇಂದ್ರ ಮೋದಿಯವರು ಅವರು 10 ವರ್ಷಗಳಲ್ಲಿ ನೀಡಿದ್ದ ಯಾವ ಭರವಸೆಗಳನ್ನು ಬಗೆಹರಿಸಿಲ್ಲ. ನಾವು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 165 ರಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೇ 30 ಹೊಸ ಯೋಜನೆಗಳನ್ನು ಜಾರಿ ಮಾಡಿದ್ದೇವೆ. 2023 ರಲ್ಲಿ ನಮ್ಮ ಪ್ರಣಾಳಿಕೆಯಲ್ಲಿ ಅನೇಕ ಭರವಸೆ ನೀಡಿ, 82 ಭರವಸೆಗಳನ್ನು ಈಡೇರಿಸಿ 5 ಗ್ಯಾರಂಟಿಗಳನ್ನೂ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಜಾರಿ ಮಾಡಿದ್ದೇವೆ. 195 ಕೋಟಿ ಮಹಿಳೆಯರು ಶಕ್ತಿ ಯೋಜನೆಯಡಿ ಪ್ರಯಾಣ ಮಾಡಿ ಅದರ ಮತ್ತ ಉಳಿತಾಯವಾಗಿದೆ. ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹ ಜ್ಯೋತಿ, ಯುವನಿಧಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.

ಬಿಜೆಪಿ, ನರೇಂದ್ರ ಮೋದಿ ನುಡಿದಂತೆ ನಡೆಯದೇ ಸುಳ್ಳು ಹೇಳಿಕೊಂಡು ದೇಶದ ಉದ್ದಗಲಕ್ಕೂ ತಿರುಗುತ್ತಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. 34000 ಕೋಟಿ ರೂ.ಗಳನ್ನು ಕಳೆದ ವರ್ಷ ಹಾಗೂ ಪ್ರಸಕ್ತ ಸಾಲಿನಲ್ಲಿ 52009 ಕೋಟಿ ರೂ.ಗಳನನು ಮೀಸಲಿರಿಸಲಾಗಿದೆ. 1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗಾಗಿ ಮೀಸಲಿರಿಸಿದೆ. ಬಿಜೆಪಿಯವರು ಬಜೆಟ್ ನ್ನು ಓದಬೇಕು. ಬಜೆಟ್ ನಲ್ಲಿ 68000 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ದಿಗೆ ಇಟ್ಟಿದ್ದೇವೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ : ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು. ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡಲು ಎಂ.ಎಸ್.ಪಿ ಯನ್ನು ಕಾನೂನಿನ ಚೌಕಟ್ಟಿಗೆ ತರಲಾಗುವುದು. ನರೇಂದ್ರ ಮೋದಿಯವರು ರೈತರ ಸಾಲ ಮನ್ನಾ ಮಾಡಿಲ್ಲ. ಆದರೆ ಮನ್ ಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 72000 ಕೋಟಿ ರೂ.ಗಳನ್ನು ಮನ್ನಾ ಮಾಡಿದ್ದಾರೆ . ನಮ್ಮ ಅವಧಿಯಲ್ಲಿ ರಾಜ್ಯ ಸರ್ಕಾರ 50,000 ರೂ.ಗಳ ವರೆಗೆ ಸೊಸೈಟಿಗಳಲ್ಲಿ ಪಡೆದ ಬೆಳೆ ಸಾಲವನ್ನು 27 ಲಕ್ಷ ರೈತರ ಸಾಲ ಮನ್ನಾ ಮಾಡಲಾಗಿತು. 8165 ಕೋಟಿ ರೂ.ಗಳನ್ನು ಸಾಲ ಮಾಡಿ ಭರಿಸಿತು. ಆದರೆ ನರೇಂದ್ರ ಮೋದಿಯವರು ರೈತರಿಗಾಗಿ ಬೇಡಿಕೆ ಇದ್ದರೂ ಸಾಲ ಮಾಡಿಲ್ಲ. ಆದರೆ ಬಂಡವಾಳಶಾಹಿಗಳು, ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲ ಮನ್ನಾ ಮಾಡಿದ್ದಾರೆ. ನರೇಂದ್ರ ಮೋದಿಯವರು ಶ್ರೀಮಂತರ ಪರವಾಗಿ ಇದ್ದಾರೆ ಎಂದರು.

ಅದಾನಿ, ಅಂಬಾನಿಗೆ ಸಹಾಯ : ಶೇ 30% ಇದ್ದ ಕಾಪೋರೇಟ್ ತೆರಿಗೆಯನ್ನು 27% ಗಿಳಿಸಿ, ಅದಾನಿ, ಅಂಬಾನಿಗೆ ಸಹಾಯ ಮಾಡಿದ್ದಾರೆ. ಸಾಮಾನ್ಯ ಜನರ ಪರೋಕ್ಷ ತೆರಿಗೆಯನ್ನು 50% ಗೇರಿಸಿದರು. ಬಡವರು ಮಧ್ಯಮ ವರ್ಗದವರ ತೆರಿಗೆ ಹೆಚ್ಚಿಸಿ, ಶ್ರೀಮಂತರ ತೆರಿಗೆಯನ್ನು ಕಡಿಮೆ ಮಾಡಿದ್ದಾರೆ. ಅದಕ್ಕಾಗಿ ಬಿಜೆಪಿಯನ್ನು ತಿರಸ್ಕರಿಸಬೇಕೆಂದು ಕರೆ ನೀಡಿದರು. ಕಿರಿಯ ವಯಸ್ಸಿನ ಸಾಗರ್ ಖಂಡ್ರೆಯವರನ್ನು ನಮ್ಮ ಅಭ್ಯರ್ಥಿಯಾಗಿಸಿದ್ದು, ಅವರಿಗೆ ನಿಮ್ಮ ಮತವನ್ನು ಹಾಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಶಾಸಕ ಬಿ.ಆರ್. ಪಾಟೀಲ್, ಶಾಸಕರಾದ ಅಜಯ್ ಸಿಂಗ್, ಅಭ್ಯರ್ಥಿ ಸಾಗರ್ ಖಂಡ್ರೆ, ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

5 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

18 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

18 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

18 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

18 hours ago