ರಾಜ್ಯ

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆತಿದೆ. ಎಲ್ಲೆಡೆ ಅಭೂತಪೂರ್ವ ಸ್ಪಂದನೆ ಸಿಗುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಬಡವರಿಗಾಗಿ ರೂಪಿಸಿಸಲ್ಪಟ್ಟಿವೆ. ಎಲ್ಲಾ ಜಾತಿ, ಧರ್ಮ, ಭಾಷೆಗಳಿಗೆ ಸೇರಿದ ಜನರಿಗೆ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದು, ಗ್ಯಾರಂಟಿ ಯೋಜನೆಗಳು ಸಾಮಾಜಿಕ ಬದ್ಧತೆಯನ್ನು ಒದಗಿಸುವ ಹೂಡಿಕೆಯಾಗಿದೆ. ಇದೂ ಕೂಡ ಅಭಿವೃದ್ದಿಯೇ ಎಂದರು.

ಅಭಿವೃದ್ಧಿಯೆಂದರೆ ಕೇವಲ ರಸ್ತೆ, ಸೇತುವೆ, ಕಟ್ಟಡಗಳು ಮಾತ್ರವಲ್ಲ. ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವುದು ಕೂಡ ಆಗಿದೆ ಎಂದರು.

ಸಾಮಾಜಿಕ ಯೋಜನೆಗಳನ್ನು ಘೋಷಿಸಿದ ಮೇಲೆ ಬಿಜೆಪಿ ಅಂದಿನಿಂದ ಇಂದಿನವರೆಗೆ ವಿರೋಧಿಸುತ್ತಲೇ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸೇರಿದಂತೆ ಎಲ್ಲರೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಹೇಳಿಕೊಂಡು ಬಂದಿದ್ದಾರೆ. ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಚನೆಗಳು ಜಾರಿಯಲ್ಲಿದ್ದು 24/3/2026 ವರೆಗೆ 1.31 ಲಕ್ಷ ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದೇವೆ. ಇದರ ಜೊತೆಗೆ, ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ಪೊಲೀಸ್ ವ್ಯವಸ್ಥೆಗೆ ವೆಚ್ಚ, ಎಸ್ ಸಿ ಎಸ್ ಪಿ/ ಟಿ ಎಸ್ ಪಿ ಯೋಜನೆಗಳಿಗೆ ವೆಚ್ಚ ಮಾಡುವುದನ್ನು ಕಡಿಮೆ ಮಾಡಿಲ್ಲ. ಕಳೆದ ವರ್ಷದಲ್ಲಿ 42,000 ಕೋಟಿ ವೆಚ್ಚ ಮಾಡಿದ್ದರೆ, ಈ ವರ್ಷ 44,000 ಕೋಟಿಗೂ ಹೆಚ್ಚು ವೆಚ್ಚ ಮಾಡಲಾಗುತ್ತಿದೆ. ಅಭಿವೃದ್ಧಿ ಕೆಲಸಗಳ್ಯಾವುವೂ ಕುಂಠಿತವಾಗಿಲ್ಲ ಎಂದು ಹೇಳಿದರು.

ಇನ್ನು ಸಿದ್ದರಾಮಯ್ಯ ಸಾಲ ಮಾಡಿದ್ದಾರೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಆರ್ಥಿಕ ಹೊಣೆಗಾರಿಕೆ ಕಾಯ್ದೆಯನ್ನು ಬಿಜೆಪಿ ಸರಿಯಾಗಿ ಓದಿಕೊಳ್ಳಬೇಕು. ರಾಜ್ಯಗಳು ಆರ್ಥಿಕ ಸಂಕಷ್ಟದಲ್ಲಿದ್ದಾಗ 2002 ರಲ್ಲಿ ಜಾರಿಯಾದ ಈ ಕಾಯ್ದೆಯ ಪ್ರಕಾರ ಮೂರು ಮಾನದಂಡಗಳನ್ನು ಈಡೇರಿಸಬೇಕು. ಆರ್ಥಿಕ ಕೊರತೆ ಜಿಡಿಪಿಯ ಶೇ 3% ಒಳಗಿರಬೇಕು.33 ಲಕ್ಷದ 5500 ಲಕ್ಷ ಕೋಟಿ ಪೈಕಿ 25% ಸಾಲವಿರಬೇಕು. ಬಿಜೆಪಿ ಮತ್ತೊಮ್ಮೆ ಬಜೆಟ್ ಪುಸ್ಕತ ಓದಿಕೊಳ್ಳಲಿ. ಜಿ ಡಿ ಪಿ ಐ ಶೇಕಡ 25ಕ್ಕಿಂತ ಸಾಲ ಹೆಚ್ಚಾಗಬಾರದು. ನಮ್ಮ ಸಾಲ 24.94 ರಲ್ಲಿದೆ. ಹೀಗಾಗಿ ಸಾಲ ಮಿತಿಮೀರಿಲ್ಲ.

ಯಾವುದೇ ರಾಜ್ಯ ಸಿಕ್ಕಾಪಟ್ಟೆ ಸಾಲ ಮಾಡಲು ಸಾಧ್ಯವಿಲ್ಲ. ಇಷ್ಟೇ ಸಾಲ ಕೂಡಬೇಕೆಂದು ಕೇಂದ್ರ ಸರ್ಕಾರದ ಆರ್ಥಿಕ ಇಲಾಖೆ ನಿಗದಿ ಮಾಡುತ್ತದೆ. ಈ ವಿಷಯ ಬಿಜೆಪಿಗೆ ತಿಳಿದಿದೆಯೋ ಇಲ್ಲವೋ ಎನ್ನುವುದು ಗೊತ್ತಿಲ್ಲ. ಸಾಲ ಮಾಡಿದ್ದೇನೆ ಎನ್ನುವುದು ಹಸಿ ಸುಳ್ಳು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಮೀರಿಲ್ಲ. ಆರ್ಥಿಕ ಶಿಸ್ತು ಕಾಪಾಡಿಕೊಂಡಿದ್ದೇವೆ ಎಂದರು.

ಬಿಜೆಪಿಯಿಂದ ಉಚ್ಛಾಟಿತರಾಗಿರುವ ಶಾಸಕ ಯತ್ನಾಳ್ ಅವರನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ಬಿಜೆಪಿಯವರು ಸೋಲಿನ ಭಯದಿಂದ ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಪ್ರತಿಪಕ್ಷಗಳ ಹೇಳಿಕೆಗಳಿಗೆ ನಾವು ಪ್ರತಿಕ್ರಿಯಿಸುವುದಿಲ್ಲ. ಸರ್ಕಾರದ ಕೆಲಸವನ್ನು ಜನರ ಮುಂದಿಡುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

18 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

19 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago