Mysore
28
scattered clouds

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಹನುಮಧ್ವಜ ವಿಚಾರವಾಗಿ ಬಿಜೆಪಿ ಅನಗತ್ಯ ವಿವಾದ ಸೃಷ್ಟಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ. ಧ್ವಜ ವಿಚಾರವಾಗಿ ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಠಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಿಂದೂ ವಿರೋಧಿ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಅವರು, ಬಿಜೆಪಿಯವರು ಅನಗತ್ಯವಾಗಿ ವಿವಾದ ಹುಟ್ಟುಹಾಕ್ತಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ.

ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದಾಗ, ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು.

ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!