ಬೆಂಗಳೂರು: ರಾಜೀನಾಮೆ ಕೊಡಲು ನಾನೇನು ಕ್ರೈಂನಲ್ಲಿ ಭಾಗಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆಶಿ ರಾಜೀನಾಮೆ ನೀಡಲೇಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಿವೆ.
ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಬಿಜೆಪಿಯವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ. ನಾನು ರಾಜೀನಾಮೆ ಕೊಡಲು ಏನೂ ತಪ್ಪು ಮಾಡಿಲ್ಲ. ಬೆಂಗಳೂರು ಉಸ್ತುವಾರಿ ಸಚಿವನಾಗಿ ಸ್ಟೇಡಿಯಂಗೆ ಹೋಗಿದ್ದೆ. ಆರ್‌ಸಿಬಿ ತಂಡವನ್ನು ಬರಮಾಡಿಕೊಳ್ಳಲು ಏರ್‌ಪೋರ್ಟ್‌ಗೆ ಹೋಗಿದ್ದೆ ಎಂದರು.
ಬಿಜೆಪಿಯವರು ಎಲ್ಲದಕ್ಕೂ ನನ್ನನ್ನೇ ಟಾರ್ಗೆಟ್ ಮಾಡುತ್ತಾರೆ. ಅವರ ಆಡಳಿತದ ಅವಧಿಯಲ್ಲಿ ಏನೆಲ್ಲಾ ಆಗಿದೆ ಎಂದು ಎಲ್ಲರಿಗೂ ಗೊತ್ತು ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.





