ರಾಜ್ಯ

ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ: ಡಿಕೆಶಿ

ಬೆಂಗಳೂರು: ರಾಜೀನಾಮೆ ಕೊಡಲು ನಾನೇನು ಕ್ರೈಂನಲ್ಲಿ ಭಾಗಿಯಾಗಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆಶಿ ರಾಜೀನಾಮೆ ನೀಡಲೇಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಿವೆ.

ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಬಿಜೆಪಿಯವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ. ನಾನು ರಾಜೀನಾಮೆ ಕೊಡಲು ಏನೂ ತಪ್ಪು ಮಾಡಿಲ್ಲ. ಬೆಂಗಳೂರು ಉಸ್ತುವಾರಿ ಸಚಿವನಾಗಿ ಸ್ಟೇಡಿಯಂಗೆ ಹೋಗಿದ್ದೆ. ಆರ್‌ಸಿಬಿ ತಂಡವನ್ನು ಬರಮಾಡಿಕೊಳ್ಳಲು ಏರ್‌ಪೋರ್ಟ್‌ಗೆ ಹೋಗಿದ್ದೆ ಎಂದರು.

ಬಿಜೆಪಿಯವರು ಎಲ್ಲದಕ್ಕೂ ನನ್ನನ್ನೇ ಟಾರ್ಗೆಟ್‌ ಮಾಡುತ್ತಾರೆ. ಅವರ ಆಡಳಿತದ ಅವಧಿಯಲ್ಲಿ ಏನೆಲ್ಲಾ ಆಗಿದೆ ಎಂದು ಎಲ್ಲರಿಗೂ ಗೊತ್ತು ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಅಡುಗೆ ಅನಿಲ ಕೊರತೆ ; ಸಂಸದರು ಬಾಯಿ ಬಿಡಬೇಕು ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು…

15 mins ago

ಫಲ ನೀಡಿದ ಮಾತುಕತೆ : ಹಾರ್ಮುಜ್ ಜಲಸಂಧಿ ದಾಟಿದ ತೈಲ ಟ್ಯಾಂಕರ್‌

ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…

50 mins ago

ವೈರಲ್‌ ಹುಡುಗಿ ʻಮೊನಾಲಿಸಾʼ ಮದುವೆಗೆ ತಂದೆ ವಿರೋಧಿಸಿದ್ದೇಕೆ….. ಯಾರಿ ಈ ಹುಡುಗ?

ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…

1 hour ago

32 ವರ್ಷಗಳ ನಂತರ ನಾಗರತ್ನಮ್ಮ ಸ್ಮಾರಕಕ್ಕೆ ಅಭಿವೃದ್ಧಿ ಭಾಗ್ಯ

ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…

2 hours ago

ದೇಶಾದ್ಯಂತ ಎಸ್ಮಾ ಜಾರಿ : ಗ್ಯಾಸ್‌ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು!

ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…

2 hours ago

ಸಫಾರಿಗೆ ಮೊಬೈಲ್‌ ನಿಷೇಧ ; ಪ್ರವಾಸಿಗರ ಬೇಸರ

ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…

4 hours ago