ರಾಜ್ಯ

ಬಿಜೆಪಿ ತನ್ನ ತಪ್ಪು ಮರೆಮಾಚಲು ಕೈ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಎಂಎಲ್ ಎ ಹಾಗೂ ಎಂಎಲ್‌ಸಿಗಳೊಂದಿಗೆ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಕೇಂದ್ರ ಅಥವಾ ರಾಜ್ಯಗಳಾಗಲಿ, ಬಿಜೆಪಿ ಅಧಿಕಾರದಲ್ಲಿರುವ ಕಡೆಗಳೆಲ್ಲಾ ಕಾಂಗ್ರೆಸ್ ನವರನ್ನು ಗುರಿಯಾಗಿಸಿ, ಅವರನ್ನು ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ. ಇಂತಹ ಅಸತ್ಯವಾದ ವಿಚಾರವನ್ನು ಮುನ್ನಲೆಗೆ ತಂದು ಬಿಜೆಪಿಯು ದುರುದ್ದೇಶದಲ್ಲಿ ತೊಡಗಿದ್ದಾರೆ. ಬಿಜೆಪಿಯವರು ತಮ್ಮ ತಪ್ಪುಗಳನ್ನು ಮರೆಮಾಚಲು ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದಾರೆ. ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ದೇಶದಲ್ಲಿ ಹಣದುಬ್ಬರ ಹೆಚ್ಚಿದ್ದು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಿ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ ಎಂದರು.

ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಾಲ ಸುಮಾರು 53.11 ಲಕ್ಷ ಕೋಟಿ ಆಗಿತ್ತು. ಆದರೆ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಾಲದ ಮೊತ್ತ ಸುಮಾರು 2 ಲಕ್ಷ ಕೋಟಿಯನ್ನೂ ಮೀರಿದೆ. ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದು 11 ವರ್ಷಗಳಲ್ಲಿ ಈ ಸಾಲದ ಮೊತ್ತವು 148 ಲಕ್ಷ ಕೋಟಿ ಹೆಚ್ಚಾಗಿದೆ. ಬಿಜೆಪಿಯವರು ತಮ್ಮ ಈ ತಪ್ಪನ್ನು ಮರೆಮಾಚಲು ಇಂತಹ ಸುಳ್ಳು ಪ್ರಕರಣಗಳ ಮೊರೆ ಹೋಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ:ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಸ್.ಎನ್.ಹೆಗ್ಡೆ ಇನ್ನಿಲ್ಲ

ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ತಕ್ಷಣ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು, ಪ್ರತಿವರ್ಷ 2 ಕೋಟಿ ಉದ್ಯೋಗವನ್ನು ಸೃಷ್ಟಿಸುವುದಾಗಿ ಘೋಷಿಸಿದ್ದರು. ವಿದೇಶದಲ್ಲಿನ ಕಪ್ಪುಹಣವನ್ನು ದೇಶಕ್ಕೆ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದರು. ಈ ಯಾವುದೇ ಭರವಸೆಗಳನ್ನು ಮೋದಿಯವರು ಈಡೇರಿಸಲಿಲ್ಲ. ಇತ್ತೀಚೆಗೆ ದೈನಂದಿನ ಬಳಕೆಯ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಗಳು ಗಗನಕ್ಕೇರಿವೆ. ಬಿಜೆಪಿಯವರು ತಮ್ಮ ಇಂತಹ ತಪ್ಪುಗಳನ್ನು ಮರೆಮಾಚಲು, ಇಂತಹ ಸುಳ್ಳು ಪ್ರಕರಣಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ, ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು 1937 ರಲ್ಲಿ ಜವಾಹರ್ ಲಾಲ್ ನೆಹರೂರವರು ದೇಶದ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲು ಈ ಪತ್ರಿಕೆಯನ್ನು ಪ್ರಾರಂಭಿಸಿದರು, ಇದು ಕಾಂಗ್ರೆಸ್ ಪಕ್ಷದ ಆಸ್ತಿ. ನಂತರ ಈ ಪತ್ರಿಕೆಯನ್ನು ಯಂಗ್ ಇಂಡಿಯನ್ ಸಂಸ್ಥೆ ವಹಿಸಿಕೊಂಡಿತು. ಸಂಸ್ಥೆಗೆ ಸೇರಿದ್ದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡಿಸ್ ಇವರ ಮೇಲೆ ಪ್ರಕರಣ ದಾಖಲಿಸಿ, ಇಡಿ ತನಿಖೆಯನ್ನು ಮಾಡಿಸಲಾಯಿತು. 2012ರಲ್ಲಿ ಸುಬ್ರಮಣ್ಯಂಸ್ವಾಮಿಯವರು ಇವರ ವಿರುದ್ಧ ದಾವೆ ಹೂಡಿದ್ದರು. ಪ್ರಸ್ತುತ ಇಡಿಯವರು ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿದೆ. ಈ ಪ್ರಕರಣವನ್ನುಸುಳ್ಳು ಎಂದು ಹೈಕೋರ್ಟ್ ನ್ಯಾಯವನ್ನು ಎತ್ತಿಹಿಡಿದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇದನ್ನುಓದಿ: ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್‌: ಮನೆಮಾಡಿದ ಆತಂಕ

ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಯನ್ನು ಬದಲಿಸಿ VB-G RaM Gಯೋಜನೆಯೆಂದು ಬದಲಿಸಿದ್ದಾರೆ. ರಾಜಭವನವನ್ನು ಇಂದು ಲೋಕಭವನ ಎಂದು ಬದಲಾಯಿಸಿದ್ದಾರೆ. ಇದು ಸರ್ಕಾರದ ಆಸ್ತಿಯಾಗಿದ್ದು, ಇದರ ಹೆಸರನ್ನು ಬದಲಾವಣೆ ಮಾಡಿದ್ದು ಸರಿಯಲ್ಲ. ಹೆಸರು ಬದಲಾಯಿಸುವ ಕಾರ್ಯದಲ್ಲಿ ನಿರತವಾಗಿದೆಯೇ ಹೊರತು ಬಡವರಿಗೆ ಅನುಕೂಲ ಕಲ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿಲ್ಲ ಎಂದು ಕಿಡಿಕಾರಿದರು.

ಮಹಾತ್ಮಾಗಾಂಧಿ ಹಾಗೂ ಅಂಬೇಡ್ಕರ್ ರವರ ಚಿಂತನೆಗಳನ್ನು ಇಷ್ಟಪಡದ ಬಿಜೆಪಿಯವರಿಗೆ ಬಡವರನ್ನೂ ಕಂಡರೂ ಆಗುವುದಿಲ್ಲ. ದೇಶದ ಬಡವರಿಗೆಂದು ತಂದಿರುವ ಯಾವುದೇ ಯೋಜನೆಗಳಿಗೆ ಬಿಜೆಪಿಯವರ ಸಹಮತಿಯಿಲ್ಲ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರನ್ನು ಕಡೆಗಣಿಸುವ ಬಿಜೆಪಿಯವರು , ಕರ್ನಾಟಕದಲ್ಲಿ ಬಡವರಿಗಾಗಿ ತಂದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದರು. ಆದರೆ ಈ ಜನಪರ ಯೋಜನೆಯನ್ನು ದೇಶದೆಲ್ಲೆಡೆ ಬಿಜೆಪಿ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಒಳ ಮೀಸಲಾತಿ ಗೊಂದಲ: ಏಪ್ರಿಲ್.‌24ರಂದು ವಿಶೇಷ ಸಂಪುಟ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಳ ಮೀಸಲಾತಿಯ ಗೊಂದಲವನ್ನು ಬಗೆಹರಿಸಲು ಇದೇ ೨೪ ರಂದು ವಿಶೇಷ ಸಚಿವ ಸಂಪುಟ…

35 mins ago

ಬೇಸಿಗೆಗೆ ಬತ್ತುತ್ತಿವೆ ಬೆಂಗಳೂರಿನ ಪ್ರಮುಖ ಕೆರೆಗಳು

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಲೇ ಇದೆ. ಇನ್ನು ಬೆಂಗಳೂರು ನಗರದಲ್ಲಿ ಬಿರು ಬಿಸಿಲಿಗೆ ನಗರದ ಪ್ರಮುಖ ಕೆರೆಗಳು ಬತ್ತುತ್ತಿವೆ.…

50 mins ago

ವಿನಯ್‌ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ: ಸ್ಪೀಕರ್‌ ಯು.ಟಿ.ಖಾದರ್‌ ಹೇಳಿದ್ದಿಷ್ಟು.!

ಮಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಶಾಸಕ ಸ್ಥಾನ ರದ್ದು ಮಾಡುವ ಬಗ್ಗೆ ಯಾವುದೇ ಅಧಿಕೃತ…

2 hours ago

ಹಾಸನ: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

ಹಾಸನ: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಎನ್‌.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಭಾಕರ್(‌45), ಪ್ರತೀಕ್‌(12) ಮೃತ…

2 hours ago

ಲಿಂಗತಾರತಮ್ಯವಿಲ್ಲದೇ ಪ್ರತಿಯೊಬ್ಬರೂ ಶಿವನ ಆರಾಧನೆ ಮಾಡುವುದನ್ನು ಬಸವಣ್ಣ ತೋರಿಸಿಕೊಟ್ಟರು: ಸುತ್ತೂರು ಶ್ರೀ ಹಿತವಚನ

ಮೈಸೂರು: ಬಸವಣ್ಣನವರು 12 ಶತಮಾನದಲ್ಲೇ ಸಾಮಾಜಿಕ ಚಳುವಳಿಯ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದರು ಎಂದು ಸುತ್ತೂರು ಮಠಾಧಿಪತಿ ಶ್ರೀ…

2 hours ago

ಮಧ್ಯಪ್ರಾಚ್ಯ ಸಂಘರ್ಷದ ಎಫೆಕ್ಟ್:‌ ಭಾರತದಲ್ಲಿ ಎಲ್‌ಪಿಜಿ ಬಳಕೆ 13% ಕುಸಿತ

ನವದೆಹಲಿ: ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದಿದ್ದು, ಭಾರತದಲ್ಲಿ ಎಲ್‌ಪಿಜಿ ಬಳಕೆ 13% ರಷ್ಟು ಕುಸಿತ ಕಂಡಿದೆ. ಭಾರತದಲ್ಲಿ ಮಾರ್ಚ್‌ನಲ್ಲಿ ಎಲ್‌ಪಿಜಿ ಬಳಕೆ…

2 hours ago