ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.
ಬಿಜೆಪಿಗೆ ಸೋಲಿನ ಭಯ
ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಗಳನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ ಹಾಗೂ ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ ಎಂದರು.
ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈ ಕಮಾಂಡ್ ಅಲ್ಲ ಎಂದರು.
ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು
ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿವೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.
ಬಿಜೆಪಿ ದ್ವಂದ್ವ ನೀತಿ
ಪಕ್ಷದಿಂದ ಉಚ್ಛಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು ಕರೆ ತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ ಎಂದರಲ್ಲದೆ ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸ್ಥಿತಿಯಲ್ಲಿದೆ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…