ಮೈಸೂರು : ಸಿಎಂ ಸಿದ್ದರಾಮಯ್ಯ ಸರ್ಕಾರ ಅಸ್ಥಿರತೆಯ ಭೀತಿ ಎದುರಿಸುತ್ತಿದೆ. ಬರ ಪರಿಸ್ಥಿತಿ ನಿರ್ವಹಣೆ ಮಾಡುವಲ್ಲಿ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿದೆ. ರಾಜ್ಯದಾದ್ಯಂತ ಭೀಕರ ಬರಗಾಲ ಉಂಟಾಗಿದೆ. ಆದರೆ ಇತ್ತ ಗಮನ ಹರಿಸದೆ ಆಂತರಿಕ ಕಲಹದಲ್ಲಿ ಕಾಂಗ್ರೆಸ್ ಮುಳುಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಅಸ್ಥಿರವಾಗಿದೆ. ಸಿಎಂ ಸಿದ್ದರಾಮಯ್ಯನವರಿಗೂ ಅಸ್ಥಿರತೆಯ ಭೀತಿ ಕಾಡುತ್ತಿದೆ. ಅವರನ್ನು ಕೆಳಗಿಳಿಸುತ್ತಾರೆಂಬ ಭೀತಿ ಆವರಿಸಿದೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಿ ಸ್ಥಾನ ಭದ್ರಪಡಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಟೀಕಿಸಿದ್ದಾರೆ.
ಬಿಜೆಪಿ ಲೀಡರ್ ಲೆಸ್ ಪಾರ್ಟಿ ಎಂದು ಜರಿದಿದ್ದ ಕಾಂಗ್ರೆಸ್ ನಾಯಕರಿಗೆ, ಅವರ ಪಾರ್ಟಿ ಎಂದರೆ ಶೇಮ್‌ಲೆಸ್ ಪಾರ್ಟಿ ಎನ್ನುವ ಮೂಲಕ ಯತ್ನಾಳ್ ತಿರುಗೇಟು ನೀಡಿದ್ದಾರೆ.
ಬಿಜೆಪಿಯಲ್ಲಿ ಪ್ರತಿಪಕ್ಷ ನಾಯಕನಿಲ್ಲದಿದ್ದರೂ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದ್ದೇವೆ. ಸದನದ ಒಳಗೆ ಹಾಗೂ ಹೊರಗೂ ಬಿಜೆಪಿ ಸರ್ಕಾರದ ನಿಲುವುಗಳನ್ನು ಖಂಡಿಸುವ ಕೆಲಸ ಮಾಡುತ್ತದೆ. ಪ್ರತಿಪಕ್ಷ ನಾಯಕನ ಆಯ್ಕೆ ವಿಳಂಬವಾಗಿರುವುದನ್ನು ಒಪ್ಪಿಕೊಳ್ಳುತ್ತೇನೆ. ಮುಂದಿನ ನಾಲ್ಕು ದಿನ ಅಥವಾ ನಲವತ್ತು ದಿನದಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಆಗಬಹುದು ಎಂದು ತಿಳಿಸಿದರು.
ನಮ್ಮಲ್ಲಿ ವಿಪಕ್ಷನಾಯಕನಿಲ್ಲ ಎಂದು ನಾವ್ಯಾರು ಸುಮ್ಮನೆ ಕುಳಿತಿಲ್ಲ. ಸರ್ಕಾರದ ವೈಫಲ್ಯಗಳ ವಿರುದ್ಧ ನಮ್ಮದೇಯಾದ ರೀತಿಯಲ್ಲಿ ಹೋರಾಟ ನಡೆಸುತ್ತಿದ್ದೇವೆ ಎಂದು ಕಾಂಗ್ರೆಸ್ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…
ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್ ಗ್ರೂಪ್ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…