ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದಲ್ಲಿ ನಡೆದಿರುವ ಮತಗಳ್ಳತನದ ದಾಖಲೆಗಳನ್ನು, ಮತಗಳ್ಳತನದ ವ್ಯವಸ್ಥಿತ ಷಡ್ಯಂತ್ರ ಮತ್ತು ವ್ಯವಸ್ಥಿತ ಕಾರ್ಯತಂತ್ರದ ದಾಖಲೆಗಳನ್ನು ವಿವರಿಸಿ ಮಾತನಾಡಿದರು.
ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ ಎಂದರು.
ಬಿಜೆಪಿ ಮತಗಳ್ಳತನದ ಮೂಲಕ ಅನೇಕ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಲೋಕಸಭೆ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ನಿರಂತರ ಅಧ್ಯಯನ, ತಪಾಸಣೆ ಬಳಿಕ ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ ಎಂದು ವಿವರಿಸಿದರು.
ಇದನ್ನು ಓದಿ: ಡಿಸೆಂಬರ್.1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ
ಸಂವಿಧಾನ ಬಾಹಿರವಾಗಿ ಅಧಿಕಾರ ಹಿಡಿಯುವುದು ಸಂವಿಧಾನಕ್ಕೆ ಎಸಗುವ ದ್ರೋಹ. ಪ್ರಜಾಪ್ರಭುತ್ವಕ್ಕೆ ಎಸಗಿದ ವಂಚನೆ. ರಾಹುಲ್ ಗಾಂಧಿಯವರು, ಬೆಂಗಳೂರು ಕೇಂದ್ರ ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನವನ್ನು ಸ್ಪಷ್ಟವಾಗಿ, ದಾಖಲೆ ಸಮೇತ ಬಯಲಿಗೆ ಎಳೆದು ದಾಖಲೆಗಳನ್ನು ದೇಶದ ಜನರ ಮುಂದೆ ಇಟ್ಟಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ, ದೇಶದ ಜನರ ಮುಂದೆ ಇರಿಸಿದ ದಾಖಲೆಗಳಿಗೂ ಉತ್ತರ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆಯ ಸ್ಥಾನಮಾನವನ್ನು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದಾರೆ. ಪ್ರಭುತ್ವ ಚುನಾವಣಾ ಪ್ರಕ್ರಿಯಿಯಲ್ಲಿ ಮೂಗು ತೂರಿಸಬಾರದು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಅದಕ್ಕಾಗಿ ಮುಕ್ತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ನಮ್ಮ ಸಂವಿಧಾನ ರೂಪಿಸಿದೆ. ಸಂವಿಧಾನದ ಮೌಲ್ಯ ಉಳಿಯಬೇಕಾದರೆ ಸ್ವತಂತ್ರ ಚುನಾವಣಾ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಎಲ್ಲಾ ಪಕ್ಷಗಳ ಜವಾಬ್ದಾರಿ ಎಂದರು.
ಆದ್ದರಿಂದ ನಾವು ಸಂವಿಧಾನದ ಮತ್ತು ಪ್ತಜಾಪ್ರಭುತ್ವ ಕಾಪಾಡಲು ಕಾಂಗ್ರೆಸ್ ಪಕ್ಷದಿಂದ ಕೋಟಿಗೂ ಅಧಿಕ ಮಂದಿಯ ಸಹಿ ಸಂಗ್ರಹ ಮಾಡಲಾಗಿದೆ. ಇದನ್ನು ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿಗಳಿಗೂ ನೀಡಲಾಗುವುದು ಎಂದರು.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…