ಬೆಂಗಳೂರು: ಪೊಲೀಸರ ಅಮಾನತು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಪೊಲೀಸರ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ರಾಜ್ಯ ಸರ್ಕಾರದ ಈ ನಡೆಗೆ ವಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ.
ಬಿಜೆಪಿ ಟೀಕೆ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಪೊಲೀಸರ ಅಮಾನತು ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ. ನಾನು ರಾಜಕೀಯ ಮಾಡಲು ಹೋಗಲ್ಲ. ಘಟನೆಗೆ ಯಾರು ಜವಾಬ್ದಾರರು ಇರುತ್ತಾರೋ ಅವರ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು.





