ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ ಇದ್ದರೇ ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು
ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ನಿಸ್ಸೀಮರು. ಜಾತಿ ಜಾತಿಗೆ, ಧರ್ಮ ಧರ್ಮಗಳಿಗೆ ವೈಯಕ್ತಿಕ ನಿಂದನೆ ಮಾಡುವವರಲ್ಲಿ ಅವರು ಮೊದಲಿಗರು. ಸಂವಿಧಾನದ ಪ್ರಕಾರ ಬಿಜೆಪಿಯವರು ಮೊದಲು ನಡೆದುಕೊಳ್ಳಲಿ. ಸಂವಿಧಾನ ರಕ್ಷಣೆಗೆ ವಿಧೇಯಕ ಮಂಡನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಇನ್ನು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜನೆ ಮಾಡುವಂತೆ ನೂತನ ಅಧ್ಯಕ್ಷ ವೆಂಕಟೇಶ್ ಮನವಿ ಮಾಡಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.





