ರಾಜ್ಯ

ಬೆಲೆ ಏರಿಕೆ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ವಸ್ತುವಿನ ಬೆಲೆಯನ್ನು ಏರಿಕೆ ಮಾಡುತ್ತಲೇ ಬರುತ್ತಿದೆ. ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟ ಪಡುತ್ತಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಆದಷ್ಟು ಬೇಗ ಬೆಲೆಯನ್ನು ಇಳಿಕೆ ಮಾಡಬೇಕು. ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಕೆಲಸವನ್ನು ಹೋರಾಟದ ಮುಖೇನ ಮಾಡುತ್ತೇವೆ ಎಂದರು.

ಈ ಹಿನ್ನೆಲೆಯಲ್ಲಿ ನಾಳೆಯಿಂದ ಜನಾಕ್ರೋಶ ಯಾತ್ರೆ ಆರಂಭವಾಗಲಿದ್ದು, ಮೊದಲಿಗೆ ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಯಾತ್ರೆಗೆ ಚಾಲನೆ ಸಿಗಲಿದೆ.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ನಾಳೆ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಮೈಸೂರು ಹಾಗೂ ಚಾಮರಾಜನಗರದಲ್ಲಿ ಯಾತ್ರೆ ಆರಂಭವಾಗಲಿದೆ.

ಯಾತ್ರೆಯುದ್ದಕ್ಕೂ ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡಲಾಗುತ್ತದೆ. ಬೆಲೆ ಏರಿಕೆಯಿಂದ ಜನತೆಗೆ ಯಾವ ರೀತಿಯಲ್ಲಿ ತೊಂದರೆಯಾಗುತ್ತಿದೆ ಎಂಬುದನ್ನು ತಿಳಿಸಿ ಹೇಳಲಾಗುತ್ತದೆ.

ಈ ಮೂಲಕ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

8 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

8 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

8 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

9 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

9 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

9 hours ago