ಬೆಂಗಳೂರು: ಬಡವರಿಗೆ ಬರೆ ಎಳೆಯುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ವಸ್ತುವಿನ ಬೆಲೆಯನ್ನು ಏರಿಕೆ ಮಾಡುತ್ತಲೇ ಬರುತ್ತಿದೆ. ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟ ಪಡುತ್ತಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಆದಷ್ಟು ಬೇಗ ಬೆಲೆಯನ್ನು ಇಳಿಕೆ ಮಾಡಬೇಕು. ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುವ ಕೆಲಸವನ್ನು ಹೋರಾಟದ ಮುಖೇನ ಮಾಡುತ್ತೇವೆ ಎಂದರು.
ಈ ಹಿನ್ನೆಲೆಯಲ್ಲಿ ನಾಳೆಯಿಂದ ಜನಾಕ್ರೋಶ ಯಾತ್ರೆ ಆರಂಭವಾಗಲಿದ್ದು, ಮೊದಲಿಗೆ ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಯಾತ್ರೆಗೆ ಚಾಲನೆ ಸಿಗಲಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ನಾಳೆ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಮೈಸೂರು ಹಾಗೂ ಚಾಮರಾಜನಗರದಲ್ಲಿ ಯಾತ್ರೆ ಆರಂಭವಾಗಲಿದೆ.
ಯಾತ್ರೆಯುದ್ದಕ್ಕೂ ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸುವ ಕೆಲಸ ಮಾಡಲಾಗುತ್ತದೆ. ಬೆಲೆ ಏರಿಕೆಯಿಂದ ಜನತೆಗೆ ಯಾವ ರೀತಿಯಲ್ಲಿ ತೊಂದರೆಯಾಗುತ್ತಿದೆ ಎಂಬುದನ್ನು ತಿಳಿಸಿ ಹೇಳಲಾಗುತ್ತದೆ.
ಈ ಮೂಲಕ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…