ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಹಾಗೂ ವಾಲ್ಮೀಕಿ ಹಗರಣಗಳಿಂದಾಗಿ ನಮ್ಮ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿರುವುದಂತು ಸುಳ್ಳಲ್ಲ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಮೈತ್ರಿ ಪಕ್ಷಗಳು ಅಂದರೆ ಜೆಡಿಎಸ್ ಬಿಜೆಪಿ ರಾಜ್ಯ ಸರ್ಕಾರವನ್ನು ಕಟ್ಟಿಹಾಕೋದಿಕ್ಕೆ ಸಜ್ಜಾಗುತ್ತಿವೆ.
ಅದರಲ್ಲೂ ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಮುಂಗಾರು ಅಧಿವೇಶನದಲ್ಲಿಯೂ ಪ್ರಸ್ತಾಪ ಮಾಡಲು ಭರ್ಜರಿ ಯೋಜನೆ ರೂಪಿಸಿದೆ. ಜೊತೆಗೆ ನಿನ್ನೆ ಸಮನ್ವಯ ಸಭೆ ಮಾಡಿ ವಿಧಾನಸಭೆ ಮತ್ತು ವಿಧಾನಪರಿಷತ್ ನಲ್ಲಿ ಜಂಟಿ ಹೋರಾಟದ ಬಗ್ಗೆ ನಾಯಕರು ಚರ್ಚೆ ಮಾಡಿದ್ದಾರೆ.
ಮುಖ್ಯವಾಗಿ ಅಧಿವೇಶನದಲ್ಲಿ ಮುಡಾ ಸೈಟ್ ಪ್ರಕರಣ ಮತ್ತು ವಾಲ್ಮೀಕಿ ನಿಗಮದ ಹಗರಣ ತಾರ್ಕಿಕ ಅಂತ್ಯದವರೆಗೂ ಮುಂದುವರೆಸಲು ನಿರ್ಧಾರ ಮಾಡಲಾಗಿದೆ. ಇದರ ಜೊತೆಗೆ ಬೆಲೆ ಏರಿಕೆ, ಡೆಂಗ್ಯೂ, ಕಾನೂನು ಸುವ್ಯವಸ್ಥೆ ಮತ್ತೀತರ ವಿಷಯ ಆಯಾ ಸನ್ನಿವೇಶಕ್ಕೆ ತಕ್ಕಂತೆ ಪ್ರಸ್ತಾಪ ಮಾಡಲಿದೆ.
ಮುಖ್ಯವಾಗಿ ಸದನದ ಆರಂಭದಲ್ಲೆ ಪ್ರತಿಭಟನೆ ಮಾಡದೆ ವಿಪಕ್ಷವಾಗಿ ಪ್ರಸ್ತಾಪ ಮಾಡಬೇಕಿರುವ ಎಲ್ಲಾ ವಿಷಯಗಳನ್ನ ಪ್ರಸ್ತಾಪ ಮಾಡಿದ ಬಳಿಕ ಕೊನೆಯಲ್ಲಿ ಪ್ರತಿಭಟನೆ ಮಾಡಬೇಕು, ಮುಡಾ ಹಗರಣಕ್ಕೆ ಹೆಚ್ಚಿನ ಹೊತ್ತು ನೀಡಬೇಕು ಎಂದು ಸಭೆಯಲ್ಲಿ ನಿರ್ಧಾರ ಮಾಡಿದ್ದಾರೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…