ಬೆಂಗಳೂರು: ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸಂಸದರ ಅಭಿನಂದನಾ ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಳೆದ 2018ರಲ್ಲೂ ನನಗೆ ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡುವ ಆಸೆಯಿತ್ತು. ಈಗ ಆ ವಿಷಯಗಳನ್ನು ಚರ್ಚೆ ಮಾಡಲ್ಲ. ಅದು ಮುಗಿದು ಹೋದ ಪ್ರಸಂಗ. ಆಗಿರುವ ಎಲ್ಲಾ ಕಹಿ ಘಟನೆಗಳನ್ನು ಮರೆತು ಮುಂದೆ ಹೋಗಬೇಕಿದೆ.
ಲೋಕಸಭೆ ಚುನಾವಣೆಯಲ್ಲಿ ಮಾಡಿಕೊಂಡ ಮೈತ್ರಿಯಂತೆ ಮುಂದಿನ ಪಾಲಿಕೆ ಚುನಾವಣೆ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗೂ ನಾವು ಸಜ್ಜಾಗಬೇಕಿದೆ ಎಂದು ಕರೆ ನೀಡಿದರು.
ಇನ್ನೂ ಮುಂದುವರಿದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಯಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಇದರ ನಡುವೆ ಈಗ ಪೆಟ್ರೋಲ್, ಡೀಸೆಲ್ ಬೆಲೆ ಕೂಡ ಜಾಸ್ತಿಯಾಗಿದೆ. ಬೆಲೆ ಏರಿಕೆಗೆ ಗ್ಯಾರಂಟಿ ಯೋಜನೆಗಳೇ ಮುಖ್ಯ ಕಾರಣ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರ ಹೆಣಗಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…