ಪಂಚಾಯತ್ ರಾಜ್ ವ್ಯವಸ್ಥೆ ಬಲವರ್ಧನೆಗೆ ಬಿಜೆಪಿ, ಜೆಡಿಎಸ್ ಕೊಡುಗೆ ಶೂನ್ಯ : ಸಿದ್ದು

ಮಂಡ್ಯ: ಸ್ಥಳೀಯ ಸಂಸ್ಥೆಗಳಿಗೆ ಬಿಜೆಪಿ, ಜೆಡಿಎಸ್ ಕೊಡುಗೆ ಶೂನ್ಯ. ಪಂಚಾಯತ್ ರಾಜ್ ವ್ಯವಸ್ಥೆ ಬಲವರ್ಧನೆಗೆ ಬಿಜೆಪಿ, ಜೆಡಿಎಸ್ ಕೊಡುಗೆ ಶೂನ್ಯ. ಸ್ಥಳೀಯ ಸಂಸ್ಥೆಗಳಿಗೆ ಬಲ ಕೊಟ್ಟಿದ್ದು ಕಾಂಗ್ರೆಸ್ ಎಂದು ಮಂಡ್ಯದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ

ವಿವಿಧ ಪಕ್ಷಗಳ ಹಲವಾರು ನಾಯಕರು ಕಾಂಗ್ರೆಸ್ ಪಕ್ಷದತ್ತ ಬರುತ್ತಿದ್ದಾರೆ. ಈಗಾಗಲೇ ಹಲವರು ಬರುತ್ತಿದ್ದಾರೆ. ಇನ್ನು ಹಲವರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಮುಂದೆ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ. ಕಂಟ್ರಾಕ್ಟರ್ ಅಸೋಸಿಯೇಷನ್ ಪ್ರಧಾನಿಗೆ ಪತ್ರ ಬರೆದಿದೆ. ಈ ಸರ್ಕಾರ 40 ಪರ್ಸೆಂಟ್ ಲಂಚ ಪಡೆಯುತ್ತಿದೆ ಅಂತಾ ಆರೋಪಿಸಿದೆ. 78 ಪರ್ಸೆಂಟ್ ಹಣ ಕೆಲಸವಿಲ್ಲದೇ ಖರ್ಚಾಗ್ತಿದೆ. 20-22 ಪರ್ಸೆಂಟ್ ಹಣ ಕೆಲಸಕ್ಕೆ ಬಳಕೆ ಆಗ್ತಿರೋದು. ಹೀಗಾದರೆ ಏನು ಅಭಿವೃದ್ಧಿ ಮಾಡಲು ಸಾಧ್ಯ? ಇದನ್ನ ಹೇಳಿದ್ರೆ ಕಾಂಗ್ರೆಸ್ ಅವಧಿಯಲ್ಲೂ ಇತ್ತು ಅಂತಾರೆ. ಹಾಗಾದರೆ ನಮ್ಮದನ್ನೂ ಸೇರಿಸಿ, ತನಿಖೆ ಮಾಡಿಸಿ ಎಂದು ಹೇಳಿದ್ದಾರೆ.

ಎಲ್ಲಾ ವರ್ಗಗಳಿಗೆ ರಾಜಕೀಯ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್. ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆ, ಬದ್ಧತೆ ಇರೋದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಇದಕ್ಕೆ ಜೆಡಿಎಸ್, ಬಿಜೆಪಿ ಪಕ್ಷಗಳ ಕೊಡುಗೆ ಏನು? ನರೇಗ ಯೋಜನೆ ಜಾರಿಗೆ ತಂದಿದ್ದು ಕಾಂಗ್ರೆಸ್. ನರೇಗ ಯೋಜನೆಯಿಂದ ಪಂಚಾಯಿತಿಗಳಿಗೆ ಕೋಟಿ ಕೋಟಿ ಅನುದಾನ ನೀಡಲಾಗಿದೆ. ಹಲವು ತಿಂಗಳಿಂದ ನರೇಗ ಯೋಜನೆಯಡಿ ಕೂಲಿ ಹಣ ಕೊಟ್ಟಿಲ್ಲ. ನಮ್ಮ ಕಾಲದಲ್ಲಿ ಮಂಜೂರಾದ ಮನೆಗಳಿಗೆ ಇನ್ನೂ ಅನುದಾನ ಕೊಟ್ಟಿಲ್ಲ. ಎಲ್ಲವನ್ನೂ ಲಾಕ್ ಮಾಡಿದ್ದಾರೆ. ಈ ಬಗ್ಗೆ ಯಾರು ಬೇಕಾದರೂ ಪರಿಶೀಲನೆ ಮಾಡಬಹುದು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

× Chat with us