Mysore
24
clear sky

Social Media

ಸೋಮವಾರ, 20 ಏಪ್ರಿಲ 2026
Light
Dark

ಕೆಪಿಎಸ್‌ಸಿ ಸುಧಾರಣೆಗೆ ಬಿಜೆಪಿ-ಜೆಡಿಎಸ್‌ ಆಗ್ರಹ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವ್ಯಾಪಾರದ ಅಂಗಡಿಯಾಗಿದೆ. ಅಮೂಲಾಗ್ರ ಸುಧಾರಣೆ ತರಬೇಕು ಎಂದು ಬಿಜೆಪಿ-ಜೆಡಿಎಸ್‌ ಸದಸ್ಯರು ಆಗ್ರಹಿಸಿದ್ದಾರೆ.

ವಿಧಾನಪರಿಷತ್‌ನಲ್ಲಿ ಕೆಪಿಎಸ್‌ಸಿಯ ಕರ್ಮಕಾಂಡದ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, 384 ಗೆಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರಪರೀಕ್ಷೆಯಲ್ಲಿ ಹಲವಾರು ದೋಷಗಳಾಗಿವೆ. ಅದನ್ನು ರದ್ದುಮಾಡಿ ಮತ್ತೇ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.

ಕನ್ನಡ ಭಾಷಾಂತರದಲ್ಲಿ ಮೊದಲ ಬಾರಿ 72 ತಪ್ಪುಗಳಾದರೆ, ಎರಡನೇ ಬಾರಿ 59 ಭಾಷಾಂತರ ದೋಷಗಳಾಗಿವೆ. ಇದರಿಂದ ಕನ್ನಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಜೊತೆಗೆ ಸರ್ಕಾರದ ಹಣ ಹಾಗೂ ವಿದ್ಯಾರ್ಥಿಗಳ ಸಮಯ ವ್ಯರ್ಥವಾಗಿದೆ ಎಂದು ತಿಳಸಿದರು.

ಕೆಪಿಎಸ್‌ಸಿಯಲ್ಲಿ ಹೆಚ್ಚು ಹಣ ಕೊಟ್ಟವರಿಗೆ ಹುದ್ದೆ ಸಿಗುತ್ತದೆ. ಪ್ರತಿಭಾವಂತರಿಗೆ ಅನ್ಯಾಯವಾಗಿದೆ. ತಪ್ಪಿತಸ್ತರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Tags:
error: Content is protected !!