ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವ್ಯಾಪಾರದ ಅಂಗಡಿಯಾಗಿದೆ. ಅಮೂಲಾಗ್ರ ಸುಧಾರಣೆ ತರಬೇಕು ಎಂದು ಬಿಜೆಪಿ-ಜೆಡಿಎಸ್ ಸದಸ್ಯರು ಆಗ್ರಹಿಸಿದ್ದಾರೆ.
ವಿಧಾನಪರಿಷತ್‌ನಲ್ಲಿ ಕೆಪಿಎಸ್‌ಸಿಯ ಕರ್ಮಕಾಂಡದ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಮರಪರೀಕ್ಷೆಯಲ್ಲಿ ಹಲವಾರು ದೋಷಗಳಾಗಿವೆ. ಅದನ್ನು ರದ್ದುಮಾಡಿ ಮತ್ತೇ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಕನ್ನಡ ಭಾಷಾಂತರದಲ್ಲಿ ಮೊದಲ ಬಾರಿ 72 ತಪ್ಪುಗಳಾದರೆ, ಎರಡನೇ ಬಾರಿ 59 ಭಾಷಾಂತರ ದೋಷಗಳಾಗಿವೆ. ಇದರಿಂದ ಕನ್ನಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಜೊತೆಗೆ ಸರ್ಕಾರದ ಹಣ ಹಾಗೂ ವಿದ್ಯಾರ್ಥಿಗಳ ಸಮಯ ವ್ಯರ್ಥವಾಗಿದೆ ಎಂದು ತಿಳಸಿದರು.
ಕೆಪಿಎಸ್‌ಸಿಯಲ್ಲಿ ಹೆಚ್ಚು ಹಣ ಕೊಟ್ಟವರಿಗೆ ಹುದ್ದೆ ಸಿಗುತ್ತದೆ. ಪ್ರತಿಭಾವಂತರಿಗೆ ಅನ್ಯಾಯವಾಗಿದೆ. ತಪ್ಪಿತಸ್ತರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…