ರಾಜ್ಯ

ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ವಿರುದ್ಧ ಪ್ರತಿತಂತ್ರ: ಜಿ.ಪರಮೇಶ್ವರ್‌

ಬೆಂಗಳೂರು: ಬಿಜೆಪಿ-ಜೆಡಿಎಸ್‌ ಹಮ್ಮಿಕೊಂಡಿರುವ ಪಾದಯಾತ್ರೆಗೆ ಪ್ರತಿಯಾಗಿ ನಾವು ಜನರಿಗೆ ಏನು ತಿಳಿಸಬೇಕು ಅದನ್ನು ಸಮಾವೇಶಗಳ ಮೂಲಕ ತಿಳಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.

ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರವಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ಆಗಸ್ಟ್.‌3ರಿಂದ 7 ದಿನ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಪಾದಯಾತ್ರೆಯಿಂದ ಜನರಿಗೆ ತೊಂದರೆಯಾದರೆ ಸುಮ್ಮನಿರಲ್ಲ. ಕಾನೂನು ಬಾಹಿರ ಕೆಲಸ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಡಿಕೆಶಿ ಸೂಚನೆ ಮೇರೆಗೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಯತ್ನಾಳ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮಗೆ ಬುದ್ದಿ ಹೇಳುವ ಮೊದಲು ಅವರು ತಮ್ಮ ಮನೆಯನ್ನು ಸರಿಮಾಡಿಕೊಳ್ಳಲಿ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಪಾದಯಾತ್ರೆಯಿಂದ ಏನೂ ಪ್ರಯೋಜನವಿಲ್ಲ. ಸುಖಾಸುಮ್ಮನೆ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ಮಹಾನಗರ ಪಾಲಿಕೆ : 10.20ಕೋಟಿ ಉಳಿತಾಯ ಬಜೆಟ್‌ಗೆ ಅನುಮೋದನೆ

ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್‌ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು…

19 mins ago

ನನಗೆ ಎಲ್ಲಾ ದಿನಗಳು ಒಂದೆ, ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇವೆ : ಮುಖ್ಯಮಂತ್ರಿ

ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…

48 mins ago

ಮಡಿಕೇರಿಯಲ್ಲಿ ಹುಲಿ ಪ್ರತ್ಯಕ್ಷ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…

53 mins ago

ಧರ್ಮ ಸಂಕಟ ; ರಾಜ್ಯದಲ್ಲಿರುವ 12 ಸಾವಿರ ದಲಿತ ಕ್ರಿಶ್ಚಿಯನ್ನರಿಗೆ ಎಸ್‌ಸಿ ಮೀಸಲಾತಿ ಕೈ ತಪ್ಪುವ ಭೀತಿ

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…

2 hours ago

ಮಡಿಕೇರಿ | ನಗರದಲ್ಲಿ ಮುಳ್ಳುಹಂದಿ ಪ್ರತ್ಯಕ್ಷ

ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…

2 hours ago

ಹನೂರು | ಪಶುವೈದ್ಯಾಧಿಕಾರಿಗಳ ನಿರ್ಲಕ್ಷದಿಂದ ಸಾವಿಗೀಡಾದ 500 ನಾಟಿ ಕೋಳಿಗಳು

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…

3 hours ago