Mysore
14
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

2ನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್ ದೋಸ್ತಿ ನಾಯಕರ ಪಾದಯಾತ್ರೆ

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ.

ಇಂದು ಬೆಳಿಗ್ಗೆ ಶುರುವಾದ ಪಾದಯಾತ್ರೆ, ಬಿಡದಿಯಿಂದ ರಾಮನಗರದ ಕೆಂಗಲ್‌ವರೆಗೆ ಸುಮಾರು 22 ಕಿ.ಮೀವರೆಗೆ ಸಾಗಲಿದೆ. ರಾಮನಗರದಲ್ಲಿ ಸಂಜೆ ವೇಳೆಗೆ ಬಿಜೆಪಿ-ಜೆಡಿಎಸ್‌ ನಾಯಕರು ಸಾರ್ವಜನಿಕ ಸಭೆ ನಡೆಸಲಿದ್ದಾರೆ.

ಪಾದಯಾತ್ರೆ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಮ್ಮ ಪಾದಯಾತ್ರೆ ನೋಡಿ ಆಡಳಿತ ಪಕ್ಷ ಕಾಂಗ್ರೆಸ್‌ ಗಾಬರಿಯಾಗಿದೆ. ರಾಜ್ಯದ ಜನರ ಪರ ನಾವು ಸರ್ಕಾರಕ್ಕೆ ಪ್ರಶ್ನೆ ಕೇಳುತ್ತಿದ್ದೇವೆ. ನಮ್ಮ ಪ್ರಶ್ನೆಗಳಿಗೆ ಸಿಎಂ ಹಾಗೂ ಡಿಸಿಎಂ ಇಬ್ಬರೂ ತಕ್ಕ ಉತ್ತರ ಕೊಡಬೇಕು. ಉತ್ತರ ಕೊಡುವ ಬದಲು ಬೆದರಿಕೆ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರದಲ್ಲಿ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಘಟನೆಗಳು ಸಂಭವಿಸುತ್ತಲೇ ಇವೆ. ಇದಕ್ಕೆಲ್ಲಾ ಯಾರು ಹೊಣೆ. ಈ ಬಗ್ಗೆ ಸೂಕ್ತ ತನಿಖೆ ಆಗಲೇಬೇಕು. ಸರ್ಕಾರದಲ್ಲಿ ನಿರಂತರವಾಗಿ ವರ್ಗಾವಣೆ ದಂಧೆಯೂ ನಡೆಯುತ್ತಿದೆ ಎಂದು ಕಿಡಿಕಾರಿದರು.

ಹಗರಣಗಳ ಬಗ್ಗೆ ಸೂಕ್ತ ಉತ್ತರ ನಮಗೆ ಬೇಕಿದೆ. ಸಿಎಂ ಹಾಗೂ ಡಿಸಿಎಂ ಇಬ್ಬರೂ ಸೇರಿ ನಮಗೆ ಉತ್ತರ ಕೊಡಬೇಕು. ಆ ವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!