ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ.
ಇಂದು ಬೆಳಿಗ್ಗೆ ಶುರುವಾದ ಪಾದಯಾತ್ರೆ, ಬಿಡದಿಯಿಂದ ರಾಮನಗರದ ಕೆಂಗಲ್‌ವರೆಗೆ ಸುಮಾರು 22 ಕಿ.ಮೀವರೆಗೆ ಸಾಗಲಿದೆ. ರಾಮನಗರದಲ್ಲಿ ಸಂಜೆ ವೇಳೆಗೆ ಬಿಜೆಪಿ-ಜೆಡಿಎಸ್ ನಾಯಕರು ಸಾರ್ವಜನಿಕ ಸಭೆ ನಡೆಸಲಿದ್ದಾರೆ.
ಪಾದಯಾತ್ರೆ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಮ್ಮ ಪಾದಯಾತ್ರೆ ನೋಡಿ ಆಡಳಿತ ಪಕ್ಷ ಕಾಂಗ್ರೆಸ್ ಗಾಬರಿಯಾಗಿದೆ. ರಾಜ್ಯದ ಜನರ ಪರ ನಾವು ಸರ್ಕಾರಕ್ಕೆ ಪ್ರಶ್ನೆ ಕೇಳುತ್ತಿದ್ದೇವೆ. ನಮ್ಮ ಪ್ರಶ್ನೆಗಳಿಗೆ ಸಿಎಂ ಹಾಗೂ ಡಿಸಿಎಂ ಇಬ್ಬರೂ ತಕ್ಕ ಉತ್ತರ ಕೊಡಬೇಕು. ಉತ್ತರ ಕೊಡುವ ಬದಲು ಬೆದರಿಕೆ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರದಲ್ಲಿ ದಿನದಿಂದ ದಿನಕ್ಕೆ ಒಂದಲ್ಲಾ ಒಂದು ಘಟನೆಗಳು ಸಂಭವಿಸುತ್ತಲೇ ಇವೆ. ಇದಕ್ಕೆಲ್ಲಾ ಯಾರು ಹೊಣೆ. ಈ ಬಗ್ಗೆ ಸೂಕ್ತ ತನಿಖೆ ಆಗಲೇಬೇಕು. ಸರ್ಕಾರದಲ್ಲಿ ನಿರಂತರವಾಗಿ ವರ್ಗಾವಣೆ ದಂಧೆಯೂ ನಡೆಯುತ್ತಿದೆ ಎಂದು ಕಿಡಿಕಾರಿದರು.
ಹಗರಣಗಳ ಬಗ್ಗೆ ಸೂಕ್ತ ಉತ್ತರ ನಮಗೆ ಬೇಕಿದೆ. ಸಿಎಂ ಹಾಗೂ ಡಿಸಿಎಂ ಇಬ್ಬರೂ ಸೇರಿ ನಮಗೆ ಉತ್ತರ ಕೊಡಬೇಕು. ಆ ವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಎಚ್ಚರಿಕೆ ನೀಡಿದರು.
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…