ಗದಗ್ (ರೋಣಾ): ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, ಸಿರಿ ದಾನ್ಯ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
1,20,000 ಕೋಟಿ ಹಣವನ್ನು ಈ ವರ್ಷ ರಾಜ್ಯ ಸರ್ಕಾರ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಇದಲ್ಲದೆ 52000 ಕೋಟಿ ರೂಪಾಯಿಯನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ನೇರವಾಗಿ ಹಾಕುತ್ತಿದ್ದೇವೆ. ಹೀಗಿದ್ದೂ ಬಿಜೆಪಿ ಬುರುಡೆ ಬಿಡುತ್ತಿದೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಪದೇ ಪದೇ ಸುಳ್ಳು ಹೇಳಿ ಅವರ ಸುಳ್ಳನ್ನು ಸತ್ಯ ಎಂದು ಬಿಂಬಿಸಲು ಯತ್ನಿಸುತ್ತಿದ್ದಾರೆ. ಆದರೆ ರಾಜ್ಯದ ಜನತೆ ಇವರ ಸುಳ್ಳು ನಂಬುವಷ್ಟು ಮೂರ್ಖರಲ್ಲ ಎಂದರು.
ರಾಜ್ಯದ 4.5 ಕೋಟಿ ಮಂದಿ ಗ್ಯಾರಂಟಿ ಯೋಜನೆಗಳ ನೇರ ಲಾಭ ಪಡೆಯುತ್ತಿದ್ದಾರೆ. ಇದಲ್ಲದೆ ರಸ್ತೆ, ನೀರು, ಕೃಷಿ, ನೀರಾವರಿ ಯೋಜನೆಗಳಿಗೂ ಸಾವಿರಾರು ಕೋಟಿ ಖರ್ಚು ಮಾಡುತ್ತಿದ್ದೇವೆ. ಸಮಾಜ ಕಲ್ಯಾಣಕ್ಕೆ, ದಲಿತ ಸಮುದಾಯದ ಪ್ರಗತಿಗೆ, ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಸಾವಿರ ಸಾವಿರ ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದೇವೆ.ಆದರೆ ಬಿಜೆಪಿ ಜಾತಿ-ಧರ್ಮದ ನಡುವೆ ದ್ವೇಷ ಹರಡಿ, ಜನರನ್ನು ವಿಭಜಿಸುವ ಏಕೈಕ ರಾಜಕಾರಣದಲ್ಲಿ ತೊಡಗಿದೆ ಎಂದರು.
ಬಸವಣ್ಣ, ಅಂಬೇಡ್ಕರ್, ಗಾಂಧಿ, ಬುದ್ಧ ಎಲ್ಲರ ಆಶಯದಂತೆ ಸಮ ಸಮಾಜವನ್ನು ಸೃಷ್ಟಿಸುವ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿ, ಜಾರಿ ಮಾಡುತ್ತಿದೆ. ಆದರೆ ಸಮಾಜದಲ್ಲಿರುವ ಅಸಮಾನತೆಯ ಅತಿಹೆಚ್ಚು ಲಾಭ ಪಡೆಯುತ್ತಿರುವ ಬಿಜೆಪಿ, ಸಮಾನತೆಯ ವಿರೋಧಿಯಾಗಿದೆ ಎಂದರು.
ಗಜೇಂದ್ರಘಡದ ಅತ್ತೆ ಸೊಸೆ ಇಬ್ಬರೂ ಗೃಹಲಕ್ಷ್ಮಿ ಹಣವನ್ನು ಉಳಿಸಿ ಅದರಲ್ಲಿ ಬೋರ್ ವೆಲ್ ಕೊರೆಸಿ ಸಮಾಜಕ್ಕೆ ಮಾದರಿ ಆಗಿದ್ದಾರೆ ಎಂದು ಸ್ಮರಿಸಿದ ಸಿಎಂ ಅತ್ತೆ-ಸೊಸೆ ಜೋಡಿಗೆ ಅಭಿನಂದನೆ ಸಲ್ಲಿಸಿದರು.
ಇಡೀ ಜಗತ್ತಿನಲ್ಲಿ ಸಿರಿಧಾನ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ. ಹೆಚ್ಚಿನ ನಾರಿನ ಅಂಶ ಇರುವ ಸಿರಿದಾನ್ಯ ಬಳಸುವುದರಿಂದ ಶರೀರದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ದೇಹಕ್ಕೆ ಅಗತ್ಯವಾದ ಪ್ರೋಟೋನ್ ಹೇರಳವಾಗಿ ಸಿಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಸಿರಿದಾನ್ಯ ಬೆಳೆಯುವ ರೈತರಿಗೆ ನಾನಾ ರೀತಿಯ ಅನುಕೂಲ ಮಾಡಿಕೊಡುತ್ತಿದೆ ಎಂದರು.
ಜೆ.ಎಸ್.ಪಾಟೀಲರು ಮಂತ್ರಿ ಆಗಲು ಅರ್ಹರು
ಜೆ.ಎಸ್.ಪಾಟೀಲ್ ಅವರು ನನ್ನ ಬಳಿ ಬರುವುದು ರೋಣಾ ಮತ ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಮಾತ್ರ. ಮುಂದಿನ ಬಜೆಟ್ ನಲ್ಲಿ ಕ್ಷೇತ್ರಕ್ಕೆ ಕೃಷಿ ಕಾಲೇಜು ನೀಡುವಂತೆ ಪಾಟೀಲರು ಒತ್ತಾಯಿಸಿದ್ದಾರೆ. ಪಾಟೀಲರಿಗೆ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನತೆ ಒತ್ತಾಯಿಸಿದ್ದಾರೆ. ಎರಡೂ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಶೀಲಿಸಲಾಗುವುದು. ಜೆ.ಎಸ್.ಪಾಟೀಲರಿಗೆ ಮಂತ್ರಿ ಆಗುವ ಎಲ್ಲಾ ಅರ್ಹತೆಗಳಿವೆ. ಮುಂದೆ ನೋಡೋಣ ಎಂದು ಸಿಎಂ ಭರವಸೆ ನೀಡಿದರು.
ಮಂಡ್ಯ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ…
ಬೆಳಗಾವಿ : ರೈತರ ಅನುಕೂಲಕ್ಕಾಗಿ ಜಮೀನುಗಳಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಡಿಪಿಎಆರ್ ಇಲಾಖಾ ವತಿಯಿಂದ ಅಭಿವೃದ್ಧಿ ಪಡಿಸಿರುವ ಜಿ.ಪಿ.ಎಸ್…
ಬೆಳಗಾವಿ : ರಾಜ್ಯದಲ್ಲಿ ಎಲ್ಲಾ ವರ್ಗದ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆ ಮೂಲಕ ಸಹಾಯಧನದಡಿಯಲ್ಲಿ ಒದಗಿಸಲಾಗುತ್ತಿದೆ ಎಂದು…
ನಂಜನಗೂಡು : ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಕೆರೆಯ ಸಮೀಪವಿರುವ ರೈತ ಕೆಂಪಯ್ಯ ಅವರ ತೋಟದ ಬಳಿ ಮಂಗಳವಾರ ಹುಲಿ ಕಾಣಿಸಿಕೊಂಡಿದ್ದು,…
ಮೈಸೂರು : ಎಲ್ಲರಿಗೂ ಸಮಾನ ಅವಕಾಶ, ಸಮಾನ ಹಕ್ಕುಗಳನ್ನು ಒದಗಿಸಿರುವ ಸಂವಿಧಾನವನ್ನು ಸಂಪೂರ್ಣವಾಗಿ ಓದಿ ಅರ್ಥ ಮಾಡಿಕೊಂಡರೆ ಮಾತ್ರ ಕೋಮು…