Mysore
30
few clouds

Social Media

ಸೋಮವಾರ, 20 ಜನವರಿ 2025
Light
Dark

ಮೂರನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ

ಚನ್ನಪಟ್ಟಣ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಮೂರನೇ ದಿನವಾದ ಇಂದು ಕೆಂಗಲ್‌ನಲ್ಲಿರುವ ಆಂಜನೇಯ ದೇವಸ್ಥಾನದ ವೃತ್ತದಿಂದ ಪ್ರಾರಂಭವಾದ ಪಾದಯಾತ್ರೆಯಲ್ಲಿ  ಕೇಂದ್ರ ಸಚಿವ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.‌ಅಶೋಕ್‌, ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಭಾಗಿಯಾಗಿದ್ದಾರೆ.

ಇಂದಿನ ಪಾದಯಾತ್ರೆ ಮಾರ್ಗದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಕಾರ್ಯಕರ್ತರನ್ನು ಉದ್ದೇಶಿಸಿ ಸಭೆ ನಡೆಸಲಿದ್ದು, ರಾಜ್ಯ ಸರ್ಕಾರದ ವಿರುದ್ಧ ಮುಂದೆ ಯಾವೆಲ್ಲಾ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದನ್ನು ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ.

ಪಾದಯಾತ್ರೆಯುದ್ದಕ್ಕೂ ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಸಚಿವರ ವಿರುದ್ಧವೂ ಆಕ್ರೋಶ ಹೊರಹಾಕುತ್ತಿರುವ ಬಿಜೆಪಿ-ಜೆಡಿಎಸ್‌ ನಾಯಕರು, ಘಟನೆ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

 

 

Tags: