ಚನ್ನಪಟ್ಟಣ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಮೂರನೇ ದಿನವಾದ ಇಂದು ಕೆಂಗಲ್‌ನಲ್ಲಿರುವ ಆಂಜನೇಯ ದೇವಸ್ಥಾನದ ವೃತ್ತದಿಂದ ಪ್ರಾರಂಭವಾದ ಪಾದಯಾತ್ರೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಭಾಗಿಯಾಗಿದ್ದಾರೆ.
ಇಂದಿನ ಪಾದಯಾತ್ರೆ ಮಾರ್ಗದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾರ್ಯಕರ್ತರನ್ನು ಉದ್ದೇಶಿಸಿ ಸಭೆ ನಡೆಸಲಿದ್ದು, ರಾಜ್ಯ ಸರ್ಕಾರದ ವಿರುದ್ಧ ಮುಂದೆ ಯಾವೆಲ್ಲಾ ತೀರ್ಮಾನ ತೆಗೆದುಕೊಳ್ಳಬೇಕು ಎಂಬುದನ್ನು ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ.
ಪಾದಯಾತ್ರೆಯುದ್ದಕ್ಕೂ ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರ ವಿರುದ್ಧವೂ ಆಕ್ರೋಶ ಹೊರಹಾಕುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರು, ಘಟನೆ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…