ರಾಜ್ಯ

ಬೆಂಗಳೂರು ವಿಭಜನೆಗೆ ಬಿಜೆಪಿ-ಜೆಡಿಎಸ್‌ ಬಿಡಲ್ಲ, ತಿದ್ದುಪಡಿಗೆ ಒಪ್ಪದಿದ್ದರೆ ಹೋರಾಟ: ಆರ್‌.ಅಶೋಕ

ಬೆಂಗಳೂರು:ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ವಿಭಜನೆಯಾಗಬಾರದು ಹಾಗೂ ಈ ನಗರ ಕನ್ನಡಿಗರಿಗಾಗಿಯೇ ಇರಬೇಕು ಎಂಬ ಕಾರಣಕ್ಕೆ ರಾಜ್ಯ ಸರ್ಕಾರದ ಬೆಂಗಳೂರು ವಿಭಜನೆ ತೀರ್ಮಾನವನ್ನು ವಿರೋಧಿಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ರಾಜ್ಯ ಸರ್ಕಾರದಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸ್ಥಾಪನೆಗೆ ಸಂಬಂಧಿಸಿದಂತೆ ಸಾಧಕ-ಬಾಧಕ ಚರ್ಚಿಸಲು ಆಯೋಜಿಸಿದ್ದ ಪ್ರಾತ್ಯಕ್ಷಿಕೆಯಲ್ಲಿ ಅವರು ಪಾಲ್ಗೊಂಡಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಬ್ಭಾಗವಾಗದೆ ಹೀಗೆಯೇ ಉಳಿಯಬೇಕು. ಇಲ್ಲಿ ಕನ್ನಡಿಗರೇ ಸಾರ್ವಭೌಮರಾಗಿದ್ದು, ಇದು ಕನ್ನಡಿಗರಿಗಾಗಿಯೇ ಉಳಿಯಬೇಕು. ಇಲ್ಲಿ ಕನ್ನಡದವರೇ ಮೇಯರ್‌ ಆಗಬೇಕು. ಇದಕ್ಕಾಗಿ ಬೆಂಗಳೂರು ವಿಭಜನೆಯನ್ನು ಬಿಜೆಪಿ ಮತ್ತು ಜೆಡಿಎಸ್‌ ವಿರೋಧಿಸುತ್ತವೆ ಎಂದು ತಿಳಿಸಿದರು.

ಬಿಬಿಎಂಪಿ ಅಡಿಯಲ್ಲಿ ಸ್ಲಂ ಬೋರ್ಡ್‌, ಜಲಮಂಡಳಿ, ಬಿಎಂಟಿಸಿ ಬರುವುದಿಲ್ಲ. ಇವೆಲ್ಲವೂ ಒಂದೇ ಕಡೆ ಬಂದು, ಬಿಬಿಎಂಪಿಯೇ ನಿರ್ವಹಣೆ ಮಾಡಿದರೆ ಪ್ರತ್ಯೇಕವಾಗಿ ಐಎಎಸ್‌ ಅಧಿಕಾರಿಗಳನ್ನು ನೇಮಕ ಮಾಡುವುದು ತಪ್ಪುತ್ತದೆ. ಸರ್ಕಾರಕ್ಕೆ ಖರ್ಚು ಕಡಿಮೆಯಾಗುವುದರ ಜೊತೆಗೆ, ಜನರು ಒಂದೇ ಕಡೆ ಸೇವೆಗಳನ್ನು ಪಡೆಯಬಹುದು. ಬೇರೆ ನಗರಗಳಲ್ಲೂ ಇದೇ ರೀತಿಯಿದ್ದು, ಬೆಂಗಳೂರಿಗೂ ಇಂತಹ ವ್ಯವಸ್ಥೆ ತರಬೇಕಿದೆ ಎಂದರು.

ರಾಜ್ಯ ಸರ್ಕಾರದ ಈ ವಿಧೇಯಕದಿಂದ ಕೆಳಹಂತದ ಪುರಪಿತೃಗಳಿರಯವ ಸಂಸ್ಥೆಯ ಅಧಿಕಾರ ಕುಂಠಿತವಾಗುವ ಅಪಾಯವಿದೆ. ಆದ್ದರಿಂದ ಇದರಲ್ಲಿ ಬದಲಾವಣೆ ತರಬೇಕಿದೆ. ಈ ತಿದ್ದುಪಡಿ ಮಾಡಲು ಹಾಗೂ ವಾರ್ಡ್‌ ಹೆಚ್ಚಳಕ್ಕೆ ವಿಳಂಬವಾದರೆ ಹಿಂದಿನಂತೆ 198 ವಾರ್ಡ್‌ಗಳಿಗೆ ಚುನಾವಣೆ ನಡೆಸಬೇಕು. ಈ ಕುರಿತು ರಾಜ್ಯ ಸರ್ಕಾರಕ್ಕೆ ತಿಳಿಸಲಾಗುವುದು. ಮಂಡನೆಯಾಗಿರುವ ವಿಧೇಯಕದಿಂದ ಎಷ್ಟು ಸಮಸ್ಯೆಯಾಗಲಿದೆ ಎಂಬುದನ್ನು ಜನರಿಗೂ ತಿಳಿಸಲಾಗುವುದು ಎಂದರು.

ಇಡೀ ದೇಶಕ್ಕೆ ಒಬ್ಬ ಪ್ರಧಾನಿ, ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಇರುವಂತೆ ಬೆಂಗಳೂರು ನಗರಕ್ಕೆ ಒಬ್ಬ ಮೇಯರ್ ಇರಲಿ. ಅವರ ಅಧಿಕಾರಾವಧಿ ಎರಡೂವರೆ ವರ್ಷ ಅಥವಾ ಐದು ವರ್ಷ ನಿಗದಿಪಡಿಸಿದರೂ ಅಡ್ಡಿಯಿಲ್ಲ ಎಂದರು.

ಕಾಂಗ್ರೆಸ್ ಸರ್ಕಾರ ತಜ್ಞರು ನೀಡಿರುವ ವರದಿಯ ಶೇಕಡಾ ಇಒ್ಪತ್ತರಿಂದ ಮುವತ್ತರಷ್ಟನ್ನು ಮಾತ್ರ ವಿಧೇಯಕದಲ್ಲಿ ಅಳವಡಿಸಿಕೊಂಡಿದೆ ಎಂಬುದನ್ನು ವಿ.ರವಿಚಂದ್ರ ಅವರು ಸ್ಪಷ್ಟಪಡಿಸಿದ್ದಾರೆ. ಜತೆಗೆ ಯಾರಾದರೂ ಕೊಟ್೯ನಲ್ಲಿ ಪ್ರಶ್ನೆ ಮಾಡಿದರೆ ಬಿದ್ದು ಹೋಗುತ್ತದೆ ಎಂದೂ ತಿಳಿಸಿದ್ದಾರೆ. ಈ ಹಿನ್ನೆಲೆ ಯಲ್ಲಿ ಅದರಲ್ಲಿರುವ ಲೋಪಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಗುವುದು. ಒಂದು ವೇಳೆ ಒಪ್ಪದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಎಲ್ಲಾ ವಿಷಯಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ. ಪ್ರಮುಖರ ಸಮಿತಿ ರಚಿಸಿ ವಿವರವಾಗಿ ವಿಧೇಯಕದ ಬಗ್ಗೆ ಅಧ್ಯಯನ ನಡೆಸಿ ಬದಲಾವಣೆ ಕುರಿತು ವರದಿ ನೀಡಲಾಗುವುದು ಎಂದು ವಿವರಿಸಿದರು.

ಇದಕ್ಕೂ ಮೊದಲು ನಡೆದ ಕಾರ್ಯಕ್ರಮದಲ್ಲಿ ರವಿಚಂದ್ರ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿಧೇಯಕಕ್ಕೆ ಸಂಬಂಧಿಸಿದಂತೆ ತಮ್ಮ ಸಮಿತಿ ನೀಡಿದ್ದ ವರದಿಗೂ ರಾಜ್ಯ ಸರ್ಕಾರ ಮಂಡಿಸಿರುವ ವಿಧೇಯಕಕ್ಕೂ ಸಾಕಷ್ಟು ವೆತ್ಯಾಸವಿದೆ. ಶೇ.20 ರಷ್ಟು ಶಿಫಾರಸು ಗಳನ್ನು ಮಾತ್ರ ಪರಿಗಣಿಸಲಾಗಿದೆ ಎಂದರು. ಇದಕ್ಕೆ ಸಂಬಂಧ ಪಟ್ಟ ವಿವರಣೆ ನೀಡಿದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

12 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

12 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

14 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

16 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

20 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

20 hours ago