ಬೆಂಗಳೂರು: ವಕೀಲ ದೇವರಾಜೇಗೌಡ ಬಂಧನಕ್ಕೆ ಬಿಜೆಪಿ ಮುಖಂಡ ಸಿಟಿ ರವಿ ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೊಶ ಹೊರಹಾಕಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ಆಡಿಯೋ ರಿಲೀಸ್ ಆದ ಬಳಿಕ ಮತ್ತಷ್ಟು ಆಡಿಯೋಗಳು ಬಹಿರಂಗಗೊಳ್ಳಲಿರುವುದನ್ನು ತಡೆಯಲು ದೇವರಾಜೇಗೌಡರನ್ನು ಬಂಧಿಸಲಾಗಿದೆ.
ಎರಡನೇ ವೀಡಿಯೋ ಬಿಡುಗಡೆ ಮಾಡಿದ ಬಳಿಕ ಪೂರ್ತಿ ಆಡಿಯೋ ಬಿಡುಗಡೆಯಾದರೇ ಸರ್ಕಾರ ಪತನವಾಗಲಿದೆ ಎಂದು ದೇವರಾಜೇಗೌಡರು ಹೇಳಿಕೆ ನೀಡಿದ ಬಳಿಕವೇ ಅವರನ್ನು ಬಂಧಿಸಲಾಗಿದೆ ಎಂದು ಕಿಡಿಕಾರಿದರು.
ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಕಾಂಗ್ರೆಸ್ ನವರು ರಾಜಕೀಯ ಲಾಭ ಪಡೆಯಲು ಮುಂದಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಯಾರು ಈ ಲಾಭ ಪಡೆಯಲು ಮುಂದಾಗಿದ್ದಾರೆ ಎಂಬುದು ಶೀಘ್ರದಲ್ಲೇ ತಿಳಿಯಲಿದೆ. ಎಸ್‌ಐಟಿ ಪ್ರಕರಣ ತನಿಖೆ ನಡೆಯುತ್ತಿದೆ. ಇದನ್ನು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಾಧೀಶರ ಅಧೀನದಲ್ಲಿ ತನಿಖೆಯಾಗಬೇಕು ಎಂದು ಸಿಟಿ ರವಿ ಆಗ್ರಹಿಸಿದರು.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…