Mysore
23
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ಇಂಧನ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರಿಂದ ಸೈಕಲ್ ಜಾಥಾ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಸಿಡಿದೆದ್ದಿದ್ದು ಬೆಂಗಳೂರಿನಲ್ಲಿಂದು ಸೈಕಲ್ ಜಾಥಾ ನಡೆಸಿದ್ದಾರೆ.

ರಾಜ್ಯ ಸರ್ಕಾರವು ದಿನ ಒಂದಲ್ಲಾ ಒಂದು ಸಮಸ್ಯೆಯನ್ನು ಸೃಷ್ಟಿಮಾಡಿಕೊಳ್ಳುತ್ತಲೇ ಇದೆ. ಹೀಗಿರುವಾಗಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಡಿಢೀರ್ ಏರಿಕೆ ಮಾಡಿದ್ದು, ಜನತೆಯ ಕೆಂಗಣ್ಣಿಗೆ ಗುರಿಯಾಗಿದೆ. ಈ ಬೆನ್ನಲ್ಲೇ ರೊಚ್ಚಿಗೆದ್ದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನಲ್ಲಿಂದು ಸೈಕಲ್ ಜಾಥಾ ನಡೆಸಿದ್ದಾರೆ. ಬಿಜೆಪಿ ಕಚೇರಿಯಿಂದ ಆರಂಭವಾದ ಸೈಕಲ್ ಜಾಥಾದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಅಶ್ವಥ್ ನಾರಾಯಣ್, ಸಿ.ಟಿ.ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು.

ಈ ಘಟಾನುಘಟಿ ನಾಯಕರ ಜೊತೆಗೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಕೂಡ ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಿಂದ ಆರಂಭವಾದ ಸೈಕಲ್ ಜಾಥಾ, ವಿಧಾನಸೌಧ ತಲುಪಬೇಕಿತ್ತು. ಅಷ್ಟರಲ್ಲೇ ಎಂಟ್ರಿಕೊಟ್ಟ ಪೊಲೀಸರು ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಬಂಧಿಸಿದರು.

ಈ ವೇಳೆ ಪೊಲೀಸರು ಹಾಗೂ ಬಿಜೆಪಿ ನಾಯಕರ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆಯಿತು. ಬಳಿಕ ತೀವ್ರ ಆಕ್ರೋಶ ಹೊರಹಾಕಿದ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.
ಒಟ್ಟಾರೆಯಾಗಿ ರಾಜ್ಯ ಸರ್ಕಾರಕ್ಕೆ ಬಿಜೆಪಿ ನಾಯಕರು ಪ್ರತಿಭಟನೆಯ ಬಿಸಿ ಮುಟ್ಟಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Tags:
error: Content is protected !!