ರಾಜ್ಯ

ಮುಡಾ ಹಗರಣದ ತನಿಖೆಯನ್ನ ಸಿಬಿಐಗೆ ಯಾಕೆ ಕೊಡಬೇಕು ..? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಮುಡಾ ಹಗರಣವನ್ನು ಸಿಬಿಐಗೆ ಯಾಕೆ ಕೊಡಬೇಕು..? ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿ ನಾಯಕರಿಗೆ ಇದಿಯಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಆರೋಪದ ತನಿಖೆಯನ್ನ ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಒತ್ತಾಯ ಮಾಡುತ್ತಿರುವ ವಿಚಾರಕ್ಕೆ ನಗರದ ಕಂಠೀರವ ಕ್ರೀಡಾಂಗಣ ಬಳಿ ಮಾತನಾಡಿದ  ಸಿಎಂ,ಪ್ರಕರಣದ ತಬಿಖೆಯನ್ನ ಸಿಬಿಐಗೆ ನೀಡಬೇಕು ಎಂದು ಹೇಳಲು ಬಿಜೆಪಿಗೆ ಯಾವ ನೈತಿಕತೆ ಇದೆ. ಪ್ರಕರಣದ ತನಿಖೆಯನ್ನ ನಡೆಸಲು ಹಿರಿಯ ಐಎಎಸ್‌ ಅಧಿಕಾರಿಯೊಬ್ಬರಿಗೆ ಸೂಚಿಸಲಾಗಿದೆ. ಬಿಜೆಪಿ ಅವರು ಹೇಳ್ತಾರೆ ಎಂತ ನೀವು ಮಾಧ್ಯಮದವರು ಹೇಳ್ಬೇಡಿ. ಸಿಬಿಐ ಗೆ ಕೊಡುವ ಅವಶ್ಯಕತೆ ಇದಿಯಾ ಅಂತ ಯೋಚಿಸಿ, ನಮ್ಮ ಜಮೀನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಸ್ವಾಧೀನ ಪಡಿಸಿಕೊಂಡ ಜಮೀನಿನಲ್ಲಿ ೫೦:೫೦ ಅನುಪಾತದಲ್ಲಿ ಸೈಟು ಹಂಚಿಕೆಯಾಗಬೇಕು ಎಂದು ಯಾವ ಸರ್ಕಾರ ಕಾನೂನು ರೂಪಿಸಿತ್ತು ಎಂದು ಪ್ರಶ್ನೆ ಮಾಡಿದರು.

ಅಲ್ಲದೆ ಮುಡಾ ಸೈಟ್‌ ಹಂಚಿಕೆ ಪ್ರಕರಣದಲ್ಲಿ ಈಗಾಗಲೇ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ತನಿಖೆಗೆ ಆದೇಶ ನೀಡಲಾಗಿದೆ. ವಿವಾದಕ್ಕೀಡಾಗಿರುವ ಸೈಟ್‌ ಗಳನ್ನ ಅಮಾನತ್ತಿಲ್ಲಿಡಲಾಗಿದೆ ಮತ್ತು ಸೈಟು ಹಂಚಿಕೆಯಾದಾಗ ಮುಡಾದಲ್ಲಿದ್ದ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

26 mins ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

37 mins ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

7 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

7 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

7 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

7 hours ago