ರಾಜ್ಯ

ವಿಧಾನಸೌಧದ ದಕ್ಷಿಣ ದ್ವಾರಕ್ಕೆ ಬೀಗ ಹಾಕಲು ಯತ್ನಿಸಿದ ವಿಜಯೇಂದ್ರ, ಅಶೋಕ್

ಬೆಂಗಳೂರು: ಅತ್ತ ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು ಕೇದ್ರ ಸರ್ಕಾರದ ವಿರುದ್ಧ ತೆರಿಗೆ ಅನುದಾನದ ತಾರತಮ್ಯದ ಕುರಿತು ಪ್ರತಿಭಟನೆ ನಡೆಸುತ್ತಿದ್ದು, ಇತ್ತ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರುಗಳು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ವಿಧಾನಸೌಧದ ದಕ್ಷಿಣ ದ್ವಾರದ ಮೂಲಕ ಸಿಎಂ ಸಿದ್ದರಾಮಯ್ಯ ಕಚೇರಿಗೆ ಬಿಜೆಪಿ ನಾಯಕರು ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ತಡೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಆರ್‌ ಅಶೋಕ್‌ ಹಾಗೂ ಮುನಿರತ್ನ ದಕ್ಷಿಣ ದ್ವಾರಕ್ಕೆ ಬೀಗ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ತಡೆದರು.

ಬಳಿಕ ದಕ್ಷಿಣ ದ್ವಾರದ ಮೆಟ್ಟಿಲುಗಳ ಮೇಲೆ ಕುಳಿತ ಬಿಜೆಪಿ ನಾಯಕರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಸ್‌ನಲ್ಲಿ ಕರೆದೊಯ್ದರು. ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್‌ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಯಿ ಸೇರಿದಂತೆ ಇನ್ನೂ ಮುಂತಾದ ಹಲವು ನಾಯಕರಿದ್ದರು.

andolana

Recent Posts

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

60 mins ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

1 hour ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

2 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

3 hours ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

4 hours ago