ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಸ್ಥಿಪಂಜರಕ್ಕೆ ವ್ಯಾಪಕ ಶೋಧ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಆಗಸ್ಟ್.17ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಆಗಸ್ಟ್.17ರ ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, ಮಂಗಳೂರು ಶಾಸಕರು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ಮಂಜುನಾಥನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಈ ಕುರಿತು ಮಾತನಾಡಿದ ವಿಜಯೇಂದ್ರ ಅವರು, ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ಮಧ್ಯ ಪ್ರವೇಶ ಮಾಡಲ್ಲ. ನಾವು ಬಿಜೆಪಿ ಕಾರ್ಯಕರ್ತರಾಗಿ ಧರ್ಮಸ್ಥಳಕ್ಕೆ ಹೋಗುತ್ತಿಲ್ಲ. ಮಂಜುನಾಥನ ಭಕ್ತರಾಗಿ ಅಲ್ಲಿಗೆ ಹೋಗುತ್ತಿದ್ದೇವೆ. ಎಸ್‌ಐಟಿ ತನಿಖೆ ಮುಗಿಯಬೇಕು. ಪ್ರಕರಣವನ್ನು ಹೀಗೆಯೇ ಎಳೆದುಕೊಂಡು ಹೋಗುವುದು ಸರಿಯಲ್ಲ. ಗೊಂದಲಗಳಿಗೆ ತೆರೆ ಬೀಳಲೇಬೇಕು ಎಂದು ಆಗ್ರಹಿಸಿದರು.





