ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಳೆಹಾನಿ ಪ್ರದೇಶಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ್ದಾರೆ.
ಸಿಲ್ಕ್ ಬೋರ್ಡ್ ಸುತ್ತಮುತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್, ಶಾಸಕ ಸತೀಶ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ಬೆಂಗಳೂರಿನಲ್ಲಿ ಇಷ್ಟೆಲ್ಲಾ ಸಮಸ್ಯೆ ಇರುವಾಗ ಕಾಂಗ್ರೆಸ್ ನಾಯಕರು ಸಮಾವೇಶ ಮಾಡುತ್ತಿದ್ದಾರೆ. ಮೊದಲು ಸಂತ್ರಸ್ತರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸಲಿ ಎಂದು ಆಗ್ರಹಿಸಿದರು.





