ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ ಮಾಡಲಾಗಿದೆ.
ನಾಳೆ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ. ಮಂಗಳವಾರ ರಾತ್ರಿ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
ಅಧಿವೇಶನದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಸರ್ಕಾರವನ್ನು ಹೇಗೆ ಮಣಿಸಬೇಕು ಹಾಗೂ ಅಲ್ಲಿ ಚರ್ಚಿಸಬೇಕಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಯಲಿದೆ.





