ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ ಆರೋಪ ಮಾಡಿದ್ದಾರೆ..
ತುಂಗಭದ್ರಾ ಜಲಾಶಯದ ವಿಚಾರದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಕೇಂದ್ರ ಸರ್ಕಾರದ ಅಧೀನದಲ್ಲಿ ಡ್ಯಾಂ ಕಂಟ್ರೋಲ್‌ನಲ್ಲಿದೆ. ಜಲಾಶಯದ ಕ್ರಸ್ಟ್ ಗೇಟ್ ಎರಡು ರೀತಿಯಲ್ಲಿ ದುರಸ್ತಿ ಕಾರ್ಯದ ಬಗ್ಗೆ ಚಿಂತನೆ ನಡೆಸಿದ್ದೇವೆ. ಹೊಸಪೇಟೆಯಲ್ಲಿ ಗೇಟ್ ರೆಡಿ ಮಾಡುವ ಕೆಲಸ ಆಗುತ್ತಿದೆ. ಅನೇಕ ತಜ್ಞರು ಭೇಟಿ ನೀಡಿ ಡ್ಯಾಂ ಪರಿಶೀಲನೆ ನಡೆಸಿದ್ದಾರೆ. ಡ್ಯಾಂನ್ನು ಬಿಜೆಪಿ ನಾಯಕರು ಬಂದು ಪರಿಶೀಲನೆ ಮಾಡಲಿ ಟಾಂಗ್ ಕೊಟ್ಟರು.





