ಚನ್ನಪಟ್ಟಣ: ಇಲ್ಲಿನ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಮೂರನೇ ದಿನದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಭಾಷಣದುದ್ದಕ್ಕೂ ಬಿಜೆಪಿ-ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿದರು.
ಜೆಡಿಎಸ್ ಮುಗಿಸುವುದಕ್ಕಾಗಿಯೇ ಬಿಜೆಪಿಯವರು ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಇದೆಲ್ಲಾ ತಿಳಿದಿರುವ ಕುಮಾರಸ್ವಾಮಿ ಅವರು ವಿಧಿ ಇಲ್ಲದೆ ಅವರೊಂದಿಗೆ ಕೈ ಜೋಡಿಸಿದ್ದಾರೆ ಎಂದು ಟೀಕಿಸಿದರು.
ಭ್ರಷ್ಟಾಚಾರದಿಂದಲೇ ಅಧಿಕಾರ ಕಳೆದುಕೊಂಡ ಬಿಜೆಪಿಯ ಜೊತೆ ಜೆಡಿಎಸ್ ಸೇರಿಕೊಂಡು ಕಾಂಗ್ರೆಸ್ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಜನಪರ ಕಾಂಗ್ರೆಸ್ ಸರ್ಕಾರದ ಮೇಲೆ ಹುಸಿ ಆರೋಪಗಳನ್ನು ಹೊರಿಸಿ ಅನೈತಿಕ ಪಾದಯಾತ್ರೆ ಮಾಡುತ್ತಿರುವುದು ಇಬ್ಬರಿಗೂ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳು ಜನರ ಮನವನ್ನು ಗೆದ್ದಿರುವುದನ್ನ ಸಹಿಸದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯಕ್ಕೆ ತಪ್ಪು ಸಂದೇಶ ನೀಡಲು ಹೊರಟಿವೆ. ಆದರೆ ಇಂದಿನ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ನಮಗೆ ದೊರೆತಿರುವ ಸಾರ್ವಜನಿಕರ ಅಭೂತಪೂರ್ವ ಬೆಂಬಲ ಬಿಜೆಪಿಗರ ನಿರೀಕ್ಷೆಯನ್ನು ಹುಸಿಯಾಗಿಸಿದೆ ಎಂದರು.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…