Mysore
17
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಬಿಜೆಪಿಗರು ರೈತ ವಿರೋಧಿಗಳು: ಡಿಕೆ ಶಿವಕುಮಾರ್‌

ಬೆಂಗಳೂರು: ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದರೆ, ಇದರ ವಿರುದ್ಧ ಪ್ರತಿಭಟಿಸುವ ಮೂಲಕ ಬಿಜೆಪಿಗರು ರೈತ ವಿರೋಧಿಗಳಾಗಿ ವರ್ತಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಾಲಿನ ದರ ಏರಿಕೆ ಮಾಡಿದ್ದೇವೆ ಎಂದು ಬಿಜೆಪಿ ಆರೋಪಿಸುತ್ತಿದೆ. ಜನರ ಮೇಲೆ ಕಾಳಜಿ ಇದ್ದರೆ, ಕೇಂದ್ರದಿಂದ ಆಗುತ್ತಿರುವ ಬೆಲೆ ಏರಿಕೆ ಬಗ್ಗೆ ಮಾತನಾಡಲಿ. ಪೆಟ್ರೋಲ್‌, ಡೀಸೆಲ್‌, ಜಾನುವಾರುಗಳಿಗೆ ಹಾಕುವ ಬೂಸಾ ದರಗಳನ್ನು ಇಳಿಸಲಿ ಎಂದರು.

ನೀರಿನ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿ, ಜಲ ಮಂಡಳಿ ವಾರ್ಷಿಕವಾಗಿ 1 ಸಾವಿರ ಕೋಟಿ ನಷ್ಟ ಅನುಭವಿಸುತ್ತಿದ್ದು, ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಮುಂದಿನ ಹಂತಗಳ ಯೋಜನೆ ಕೈಗೊಳ್ಳಬೇಕಾದರೆ ದರ ಏರಿಕೆ ಅನಿವಾರ್ಯವಾಗಿದೆ. ಇದಕ್ಕೂ ಮುನ್ನ ಜನರಿಗೆ ನೀರಿನ ಪ್ರಾಮುಖ್ಯತೆ ಅರಿಯುವಂತೆ ಮಾಡಬೇಕಿದೆ ಎಂದು ತಿಳಿಸಿದರು.

ಇನ್ನು ಕಸದ ವಿಚಾರವಾಗಿ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ 2022ರಲ್ಲಿ ದುಬಾರಿ ಸೆಸ್‌ ವಿಧಿಸಿತ್ತು. ನಾವು ಅದನ್ನು ಕಡಿಮೆ ಮಾಡುತ್ತಿದ್ದೇವೆ. ಈ ವಿಚಾರವಾಗಿ ಜಾಹೀರಾತು ಹಾಗೂ ಪತ್ರಿಕಾ ಪ್ರಕಟಣೆ ಹೊರಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೆ, ಬಿಜೆಪಿಯವರು ಇದರಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ ಎಂದರು.

Tags:
error: Content is protected !!