ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವೈಯಕ್ತಿಕ ನಿಂದನೆ ಶಬ್ದ ಬಳಸಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಸಿದ್ದರಾಮಯ್ಯ ಬಳಿ ಕ್ಷಮೆಯಾಚಿಸಿದ್ದಾರೆ.
ಕೆಳದಿನಗಳ ಹಿಂದೆ ಜಿಂದಾಲ್‌ಗೆ ಭೂಮಿ ಕೊಟ್ಟಿರೋ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅರವಿಂದ್ ಬೆಲ್ಲದ್, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂಬ ಪದ ಪ್ರಯೋಗ ಮಾಡಿದ್ದರು. ಇದೀಗ ಈ ಬಗ್ಗೆ ಬೆಲ್ಲದ್, ಸಿಎಂಗೆ ಕ್ಷಮಾಪಣೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.
ಕ್ಷಮಾಪಣೆ ಪತ್ರ ಹೀಗಿದೆ….
ಆಗಸ್ಟ್ 24 ರ ಶನಿವಾರದಂದು ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ಧರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ವೇಗವಾಗಿ ಹೇಳಿರುತ್ತೇನೆ. ಆ ಸಂದರ್ಭದಲ್ಲಿ ಮಾತ್ರ ಬಳಸಿದ ಈ ಪದದ ಬಳಕೆಯು ನನಗೆ ಶೋಭೆ ತಂದಿರುವುದಿಲ್ಲ, ತಮಗೆ ನಾನು ಈ ಪತ್ರದ ಮುಖಾಂತರ ಕ್ಷಮೆಯಾಚಿಸುತ್ತಿದ್ದೇನೆ. ಎಂದು ಅರವಿಂದ್ ಬೆಲ್ಲದ್ ಕ್ಷಮಾಪತ್ರದಲ್ಲಿ ಬರೆದು ಸಿಎಂಗೆ ಕ್ಷಮೆಯಾಚಿಸಿದ್ದಾರೆ.
ಕ್ಷಮಾಪಣೆಗೆ ಸಿಎಂ ಶ್ಲಾಘನೆ
ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ.
ಜಿಂದಾಲ್ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ.
ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ.
ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹರನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.
ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ.
ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…
ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…