ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ ವಿಜಯೇಂದ್ರ ಅವರು ಬುಧವಾರ ಬೆಳಗ್ಗೆ ಭೇಟಿಯಾಗಿದ್ದಾರೆ.
ಅನಾರೋಗ್ಯದಿಂದ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಪೂರ್ಣ ಗುಣಮುಖರಾಗಿ ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿದ ಬಿ.ವೈ ವಿಜಯೇಂದ್ರ ಅವರ ಆರೋಗ್ಯ ಕುಶಲೋಪರಿ ವಿಚಾರಿಸಿದರು.
ಈ ಸಂದರ್ಭದಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಕೆ ರಾಮಮೂರ್ತಿ ಹಾಗೂ ಬಿಜೆಪಿ ಮುಖಂಡ ಸೋಮಶೇಖರ್ ಉಪಸ್ಥಿತರಿದ್ದರು.
ಇಂದು ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @hd_kumaraswamy ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ಕುಶಲೋಪರಿ ವಿಚಾರಿಸಲಾಯಿತು. ಈ ಸಂದರ್ಭದಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ @CKRBJP ಅವರು ಹಾಗೂ ಪಕ್ಷದ ಮುಖಂಡರಾದ ಶ್ರೀ ಸೋಮಶೇಖರ್ ಅವರು ಉಪಸ್ಥಿತರಿದ್ದರು. pic.twitter.com/qeFbmzSYPV
— Vijayendra Yeddyurappa (@BYVijayendra) September 6, 2023