Mysore
21
scattered clouds

Social Media

ಬುಧವಾರ, 25 ಫೆಬ್ರವರಿ 2026
Light
Dark

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

Byrathi Basavaraj

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌ ಅವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯಲ್ಲಿ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಫೆಬ್ರವರಿ.26ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಹತ್ವದ ಆದೇಶ ನೀಡಿದೆ.

ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಮಾಜಿ ಸಚಿವರನ್ನು ಪೊಲೀಸರು ಇಂದು ಬಿಗಿ ಭದ್ರತೆಯಲ್ಲಿ ಕೋರ್ಟ್‌ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಧೀಶರು ಅವರನ್ನು ಜೈಲಿಗಟ್ಟಿದ್ದಾರೆ. ಈ ಬೆಳವಣಿಗೆಯಿಂದಾಗಿ ಭೈರತಿ ಬಸವರಾಜ್‌ ಈಗ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

 

 

Tags:
error: Content is protected !!