ಬಾಗಲಕೋಟೆ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಯಾಕಾಗಬಾರದು? ನನ್ನಲ್ಲಿ ಏನು ಕೊರತೆಯಿದೆ? ಪ್ರಾಮಾಣಿಕರನ್ನು ಸಿಎಂ ಮಾಡಬೇಕು ಅಂದರೆ ಮೊದಲು ನನ್ನ ಹೆಸರೇ ಬರುತ್ತೆ. ಒಳ್ಳೆಯ ಮನುಷ್ಯ ಸಿಎಂ ಆಗಬೇಕು ಎಂದು ದೇವರು ಆದೇಶ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ. ಇಲ್ಲದಿದ್ದರೆ ನನ್ನ ಪಾಡಿಗೆ ನಾನು ಇರುತ್ತೇನೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ವಿರುದ್ಧ ಭ್ರಷ್ಟಾಚಾರ ಅಥವಾ ಏನಾದರೂ ಹಗರಣ ಇದ್ದಿದ್ದರೆ ನನ್ನನ್ನು ಬಿಡುತ್ತಿದ್ದರಾ? ಈ ಹಿಂದೆ ನನ್ನ ಮೇಲೂ ದಾಳಿ ಮಾಡಿಸಿದ್ದಾರೆ. ಗುಪ್ತಚರ ಇಲಾಖೆಯನ್ನು ಬಿಟ್ಟಿದ್ದರು. ಎಲ್ಲವನ್ನೂ ನೋಡಿದರೂ ಏನೂ ಆಗಲಿಲ್ಲ. ಅದಕ್ಕೆ ಸುಮ್ಮನೆ ಕೂತಿದ್ದಾರೆ ಅಷ್ಟೇ. ನನ್ನ ಮೇಲೆ ಆ ಭಗವಂತನ ಕೃಪೆಯಿದೆ. ಜನರ ಶಕ್ತಿಯಿದೆ ಎಂದರು.
ಇನ್ನು ಬೆಂಗಳೂರಿನಲ್ಲಿಂದು ನಡೆದ ಕೋರ್ ಕಮಿಟಿ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನನ್ನನ್ನು ಯಾಕೆ ಕೋರ್ ಕಮಿಟಿ ಸಭೆಗೆ ಕರೆಯಬೇಕು. ನಾನು ಕೋರ್ ಕಮಿಟಿ ಮೆಂಬರ್ ಅಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…