Mysore
17
scattered clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

Byrathi Basavaraj

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆಗಿರುವ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಎರಡು ದಿನಗಳ ಹಿಂದೆ ಬಂಧಿಸಿದ್ದರು.

ಕೋರ್ಟ್‌ ಹಾಜರುಪಡಿಸಿದ್ದಾಗ ಶಾಸಕ ಭೈರತಿ ಬಸವರಾಜ್‌ ಅವರಿಗೆ ಹೃದಯ ಸಂಬಂಧಿ ಕಾಯಿಲೆಯಿದೆ. ಹಾಗಾಗಿ ಚಿಕಿತ್ಸೆ ಪಡೆಯಬೇಕು ಎಂದಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್‌ ಸಿಐಡಿ ಅಧಿಕಾರಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಂತೆ ಸೂಚಿಸಿತ್ತು.

ಭೈರತಿ ಬಸವರಾಜ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿ ಆಂಜಿಯೋಗ್ರಾಂ ಸೇರಿದಂತೆ ಹಲವು ಪರೀಕ್ಷೆಗಳನ್ನು ಚಿಕಿತ್ಸೆಯನ್ನು ನೀಡಲಾಗಿತ್ತು. ಇಂದು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ಗೆ ಸಿಐಡಿ ಪೊಲೀಸರು ಭೈರತಿ ಬಸವರಾಜ್‌ ಅವರನ್ನು ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೇಳಿದ್ದಾರೆ.

ಸಿಐಡಿ ಅಧಿಕಾರಿಗಳ ವಾದ ಆಲಿಸಿದ ಕೋರ್ಟ್‌, ಫೆಬ್ರವರಿ.21ರವರೆಗೆ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

Tags:
error: Content is protected !!