Byrathi Basavaraj
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆಗಿರುವ ಭೈರತಿ ಬಸವರಾಜ್ ಅವರನ್ನು ಸಿಐಡಿ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಎರಡು ದಿನಗಳ ಹಿಂದೆ ಬಂಧಿಸಿದ್ದರು.
ಕೋರ್ಟ್ ಹಾಜರುಪಡಿಸಿದ್ದಾಗ ಶಾಸಕ ಭೈರತಿ ಬಸವರಾಜ್ ಅವರಿಗೆ ಹೃದಯ ಸಂಬಂಧಿ ಕಾಯಿಲೆಯಿದೆ. ಹಾಗಾಗಿ ಚಿಕಿತ್ಸೆ ಪಡೆಯಬೇಕು ಎಂದಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಸಿಐಡಿ ಅಧಿಕಾರಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಂತೆ ಸೂಚಿಸಿತ್ತು.
ಭೈರತಿ ಬಸವರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಆಂಜಿಯೋಗ್ರಾಂ ಸೇರಿದಂತೆ ಹಲವು ಪರೀಕ್ಷೆಗಳನ್ನು ಚಿಕಿತ್ಸೆಯನ್ನು ನೀಡಲಾಗಿತ್ತು. ಇಂದು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ಗೆ ಸಿಐಡಿ ಪೊಲೀಸರು ಭೈರತಿ ಬಸವರಾಜ್ ಅವರನ್ನು ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೇಳಿದ್ದಾರೆ.
ಸಿಐಡಿ ಅಧಿಕಾರಿಗಳ ವಾದ ಆಲಿಸಿದ ಕೋರ್ಟ್, ಫೆಬ್ರವರಿ.21ರವರೆಗೆ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…