Mysore
29
clear sky

Social Media

ಶುಕ್ರವಾರ, 07 ಫೆಬ್ರವರಿ 2025
Light
Dark

ಸಿಎಂ ಆಗಲು ಯೋಗ ಅಲ್ಲ, ಯೋಗ್ಯತೆ ಬೇಕು: ಡಿಕೆಶಿಗೆ ಟಾಂಗ್‌ ಕೊಟ್ಟ ಸಿ.ಟಿ.ರವಿ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೀಗ ಇದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ ಯೋಗ್ಯತೆ ಇದ್ದವರು ಮಾತ್ರ ಒಳ್ಳೆಯ ಸಿಎಂ ಆಗುತ್ತಾರೆ. ಸಿಎಂ ಆಗಲು ಯೋಗ್ಯತೆ ಬೇಕು ಎಂದು ಡಿ.ಕೆ.ಶಿವಕುಮಾರ್‌ಗೆ ಟಾಂಗ್‌ ಕೊಟ್ಟರು.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯ ಎದುರೇ ಡಿಕೆಶಿ ಸಿಎಂ ಆಗಲಿ ಎಂಬ ಘೋಷಣೆ ಮೊಳಗಿಸುತ್ತಾರೆ. ಸಿದ್ದರಾಮಯ್ಯಗೆ ಇದು ದೊಡ್ಡ ಅವಮಾನ. ಇದಕ್ಕಿಂತ ದೊಡ್ಡ ಅವಮಾನ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೇವಡಿ ಮಾಡಿದರು.

ಇನ್ನು ಸಂಸದೆ ಪ್ರಿಯಾಂಕಾ ಗಾಂಧಿಯನ್ನು ರಾಣಿ ಚೆನ್ನಮ್ಮಗೆ ಹೋಲಿಸಿದ ವಿಚಾರವಾಗಿ ಮಾತನಾಡಿದ ಅವರು, ಹೊಗಳುವ ಭರದಲ್ಲಿ ಮಾನಸಿಕ ಗುಲಾಮಗಿರಿ ತೋರಿಸಿದ್ದಾರೆ. ಇದು ಭಟ್ಟಂಗಿತನದ ಹೇಳಿಕೆ. ರಾಷ್ಟ್ರೀಯ ವ್ಯಕ್ತಿತ್ವಕ್ಕೂ ಈ ಮೂಲಕ ಅವಮಾನ ಮಾಡಲಾಗಿದೆ. ನಾಡಿನ ಜನತೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

Tags: